Kannada NewsKarnataka NewsLatest

*ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಭು ಚೌಹಾಣ್ ಗಂಭೀರ ಆರೋಪ*

Home add -Advt

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿಯಲ್ಲಿನ ಒಳಜಗಳ ಮತ್ತೊಮ್ಮೆ ಬಹಿರಂಗವಾಗಿದೆ. ಸ್ವಪಕ್ಷದ ನಾಯಕನ ವಿರುದ್ಧವೇ ಮಾಜಿ ಸಚಿವ ಪ್ರಭು ಚೌಹಾಣ್ ಗಂಭೀರ ಆರೋಪ ಮಾಡಿದ್ದಾರೆ.

ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಕೊಲ್ಲಲು ಗೂಂಡಾಗಳನ್ನು ಬಿಟ್ಟಿದ್ದರು ಎಂದು ಪ್ರಭು ಚೌಹಾಣ್ ಆರೋಪಿಸಿದ್ದಾರೆ. ಭಗವಂತ ಖೂಬಾಗೆ ನನ್ನ ಮೇಲೆ ಕೋಪವಿದ್ದರೆ ಗುಂಡಿಕ್ಕಿ ನನ್ನ ಹತ್ಯೆ ಮಾಡಲಿ. ಆದರೆ ನಮ್ಮ ಪಕ್ಷ, ಕಾರ್ಯಕರ್ತರಿಗೆ ಖೂಬಾ ದ್ರೋಹ ಮಾಡದಿರಲಿ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಖೂಬಾ ವಿರುದ್ಧ ಪ್ರಭು ಚೌಹಾಣ್ ನಡೆಸಿರುವ ವಾಗ್ದಾಳಿ ವಿಡಿಯೋ ವೈರಲ್ ಆಗಿದ್ದು, ಭಗವಂತ ಖೂಬಾ ಚುನಾವಣೆ ವೇಳೆ ನನ್ನನ್ನು ಸೋಲಿಸಲು ಸಾಕಷ್ಟು ಯತ್ನ ಮಾಡಿದರು. ನನ್ನ ಹತ್ಯೆಗೆ ಗೂಂಡಾಗಳನ್ನು ಬಿಟ್ಟರು. ಈಗ ನನ್ನನ್ನು ಕೊಂದು 6 ತಿಂಗಳಲ್ಲಿ ಉಪಚುನಾವಣೆಗೂ ಷಡ್ಯಂತ್ರ ನಡೆಸುತ್ತಿದ್ದಾರೆ. ರಸ್ತೆ ಮಧ್ಯೆ ನನ್ನನ್ನು ಗುಂಡಿಕ್ಕಿ ಕೊಲೆ ಮಾಡಲು ಸಂಚು ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಖೂಬಾ ಬೆಂಬಲಿಗರಿಂದಲೇ ನನಗೆ ಗೊತ್ತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Related Articles

Back to top button