LatestNationalPolitics

*ಪ್ರಧಾನಿ ಮೋದಿ ನಿವಾಸದ ಎದುರು ಧರಣಿ ಕುಳಿತ ರಾಹುಲ್ ಗಾಂಧಿ* *ಡಿ.ಕೆ.ಶಿವಕುಮಾರ ಸಾಥ್*

​​ಪ್ರಗತಿವಾಹಿನಿ ಸುದ್ದಿ: ನೀಟ್​ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಂಗ್ರೆಸ್​ ಸಂಸದರು, ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರಧಾಇ ನರೇಂದ್ರ ಮೋದಿ ನಿವಾಸದ ಎದುರು ಧರಣಿ ನಡೆಸಿದ್ದಾರೆ.

ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಿಂದ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನಿವಾಸದವರೆಗೂ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮೂಲಕ ರ್ಯಾಲಿ ನಡೆಸಿದರು.

Home add -Advt

ಬಳಿಕ ಪ್ರಧಾನಿ ಮೋದಿ ನಿವಾಸದ ಮುಂದೆ ಧರಣಿ ಕುಳಿತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀಟ್ ಪರೀಕ್ಷಾ ಅಕ್ರಮ, ವಿದ್ಯಾರ್ಥಿಗಳ ಆತ್ಮಹತ್ಯೆಗೆ ನ್ಯಾಯ ದೊರಕಿಸುವಂತೆ ಒತ್ತಾಯಿಸಿದ್ದಾರೆ. ಇದೇ ವೇಳೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತೆ ಪಟ್ಟು ಹಿಡಿದಿದ್ದಾರೆ.

ಪ್ರತಿಭಟನೆಯಲ್ಲಿ ರಾಹುಲ್​ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್​, ಕರ್ನಾಟಕ ಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್ ಸಂಸದರು, ವಿದ್ಯಾರ್ಥಿಗಳು ಕೂಡ ಭಾಗಿಯಾಗಿದ್ದಾರೆ.

Related Articles

Back to top button