Karnataka NewsLatestPolitics

*ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ: ನಾಲ್ವರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದು, ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಾರ್ಯಕ್ರಮಕ್ಕೆ ಬರಬಾರದು ಹೊರನಡೆಯಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮೆರವಣಿಗೆ ವೇಳೆ ವ್ಯಕ್ತಿಯೋರ್ವ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದಿದ್ದ.

Home add -Advt

ಪ್ರಕರಣವನ್ನು ಗಂಭೀರವಾಗಿಸಿದ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ಸಿಸಿಟಿವಿ ಆಧರಿಸಿ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಾದ ಅಖಿಲ್ ರೆಡ್ಡಿ, ಪ್ರಕಾಶ್, ಮೋಹನ್ ರಾಜ್ ಮತ್ತು ಮಹೇಂದ್ರ ಎಂಬುವವರನ್ನು ಬಂಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರ ಪೊಲೀಸ್ ಠಾಣೆ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

Related Articles

Back to top button