ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಇಲ್ಲಿನ ಸದಾಶಿವ ನಗರದ ಪ್ರದೀಪ ಎಂ.ಜೆ. ಇವರನ್ನು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿ (ಆಡಳಿತ) ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಅವರು ಆದೇಶ ಹೊರಡಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸತೀಶ ಜಾರಕಿಹೊಳಿ ಅವರು ಪ್ರದೀಪ ಎಂ.ಜೆ. ಅವರಿಗೆ ಆದೇಶ ಪ್ರತಿ ವಿತರಿಸಿದರು.
ನಂತರ ಮಾತನಾಡಿದ ಸತೀಶ ಜಾರಕಿಹೊಳಿ ಅವರು, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ನೀತಿ, ನಿಯಮ ಹಾಗೂ ಶಿಸ್ತಿಗೊಳಪಟ್ಟು ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಈ ಕೂಡಲೇ ತಮ್ಮ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷ ಸಂಘಟನೆಯ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕಾಂಗ್ರೆಸ್ ಪಕ್ಷದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಬೇಕೆಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡರಾದ ಸಿದ್ದು ಸುಣಗಾರ, ಜಯಶ್ರೀ ಮಾಳಗಿ, ಬಾಳೇಶ ದಾಸನಟ್ಟಿ, ಜಯರಾಜ್ ಹಲಗೇಕರ್, ಮಂಜುನಾಥ ಕಾಂಬಳೆ, ಮಲ್ಲಗೌಡ ಪಾಟೀಲ ಸೇರಿ ಇನ್ನಿತರರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ