Belagavi NewsBelgaum NewsLatest

*ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್: ಕಾರ್ಮಿಕರನ್ನು ಗುರುತಿಸಿ ಯೋಜನೆಗೆ ಒಳಪಡಿಸಿ: ಡಿಸಿ ಮೊಹಮ್ಮದ್ ರೋಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಯಾಪದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸುವ ಸದುದ್ದೇಶದೊಂದಿಗೆ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮಾನ್-ಧನ್ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರನ್ನು ಗುರುತಿಸಿ ಈ ಯೋಜನೆ ವ್ಯಾಪ್ತಿಗೊಳಪಡಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ (ಫೆ.3) ಜರುಗಿದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿ ಕುರಿತ ವಿಶೇಷ ನೋಂದಣಿ ಅಭಿಯಾನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಬೆಳಗಾವಿ ಜಿಲ್ಲೆ ಅತೀ ದೊಡ್ಡ ಜಿಲ್ಲೆಯಾಗಿದ್ದು ಜಿಲ್ಲೆಯಲ್ಲಿನ ಕೃಷಿ ಕಾರ್ಮಿಕರು, ಮನರೇಗಾ ಕೂಲಿ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಅಕ್ಷರ ದಾಸೋಹ ಅಡುಗೆ ಸಹಾಯಕರು, ಬೀದಿ ಬದಿ ವ್ಯಾಪಾರಸ್ಥರನ್ನು ಸಿಬ್ಬಂದಿಗಳನ್ನು ಅದೇ ರೀತಿ ಜಿಲ್ಲೆಯ ಕೌಶಲ್ಯಾಧಾರಿತ ಕಾರ್ಮಿಕರನ್ನು ಗುರುತಿಸಿ ನೋಂದಣಿ ಮಾಡಿಸುವುದರ ಮೂಲಕ ಈ ಯೋಜನೆಯ ವ್ಯಾಪ್ತಿಯೊಳಗೆ ಒಳಪಡುವಂತೆ ಪ್ರೋತ್ಸಹಿಸಬೇಕು ಎಂದರು.

ಗ್ರಾಮೀಣ, ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯೋಜನೆಯ ಕುರಿತು ಪರಿಣಾಮಕಾರಿಯಾಗಿ ಪ್ರಚಾರ ಮಾಡಬೇಕು. ವಿವಿಧ ಇಲಾಖೆ ಅಧಿಕಾರಿಗಳು, ಕಾರ್ಮಿಕ ಸಂಘಟನೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಅಸಂಘಟಿತ ವಲಯದ ಕಾರ್ಮಿಕರನ್ನು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿ ನೋಂದಾಯಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

Home add -Advt

ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ.ನಾಗರಾಜ ಅವರು ಮಾತನಾಡಿ ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರಿಗೆ ವೃದ್ಯಾಪದಲ್ಲಿ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದೊಂದಿಗೆ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯನ್ನು ಜಾರಿಗೆ ತಂದಿದೆ.

ಜಿಲ್ಲೆಯ ಅಸಂಘಟಿತ ಕಾರ್ಮಿಕರ ನೊಂದಣಿಗಾಗಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮಾಸಿಕ 3000/-ರೂ.ಗಳ ನಿಶ್ಚಿತ ಪಿಂಚಣಿ ಒದಗಿಸುವ ಈ ಯೋಜನೆಗೆ 18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಸಿ.ಎಸ್.ಸಿ. ಸೆಂಟರಗಳಲ್ಲಿ ಆಧಾರ ಕಾರ್ಡ ಹಾಗೂ ಆರಂಭಿಕ ಶುಲ್ಕ ಪಾವತಿಸುವುದರ ಮೂಲಕ ನೊಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರ

ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗನಾಯಕ, ಜಂಟಿ ಕೃಷಿ ನಿರ್ದೇಶಕ ಕೊಳಕರ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಮಲ್ಲಿಕಾರ್ಜುನ ಜೋಗುರ, ರಾಜೇಶ ಜಾಧವ, ಕಾರ್ಮಿಕ ನೀರಿಕ್ಷಕರು ಸೇರಿದಂತೆ ಜಿಲ್ಲೆಯ ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಯಾರು ಅರ್ಹರು

ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಗೃಹ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಬಿಸಿಯೂಟ ತಯಾರಕರು, ಹಮಾಲಿಗಳು, ಇಟ್ಟಿಗೆ ಕಾರ್ಮಿಕರ, ಭಟ್ಟ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆಗೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಚರ್ಮೋದ್ಯಮ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು, ಮೆಕ್ಯಾನಿಕಗಳು, ಕೈಮಗ್ಗ ಕಾರ್ಮಿಕರು ನೋಂದಾಯಿಸಿಕೊಳ್ಳುಬಹುದು.

ಅರ್ಹತೆಗಳು:

ಅಸಂಘಟಿತ ವಲಯದ ಕಾರ್ಮಿಕರಾಗಿದ್ದು 18 ರಿಂದ 40 ವರ್ಷದ ಒಳಗಿರಬೇಕು. ಮಾಸಿಕ ಆಧಾಯ 15000 ಕ್ಕಿಂತ ಕಡಿಮೆ ಇರಬೇಕು. ಆದಾಯ ತೆರಿಗೆ,ಇ.ಎಸ್.ಐ/ಪಿ.ಎಫ್/ಎನ್.ಪಿ.ಎಸ್ ಯೋಜನೆ ವ್ಯಾಪ್ತಿಗೆ ಒಳಪಡಬಾರದು.

ಅಸಂಘಟಿತ ಕಾರ್ಮಿಕರು ಸಾಮನ್ಯ ಸೇವಾ ಕೇಂದ್ರ (ಸಿ.ಎಸ್.ಸಿ) ಗಳಲ್ಲಿ ನೊಂದಾಯಿಸಿಕೊಳ್ಳಬಹುದು.

Related Articles

Back to top button