*ಪ್ರಹ್ಲಾದ್ ಜೋಶಿ ಕೀಳುಮಟ್ಟದ ಹೇಳಿಕೆ: ಎಚ್.ಕೆ.ಪಾಟೀಲ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಿ.ಟಿ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹತಾಶೆಯಿಂದ ಹೇಳಿಕೆ ನೀಡುತ್ತಿದ್ದಾರೆ ಎಂದು ಸಚಿವ ಹೆಚ್.ಕೆ ಪಾಟೀಲ್ ಅಭಿಪ್ರಾಯಪಟ್ಟರು.
ಸಿ.ಟಿ ರವಿ ಅವರನ್ನು ಪೊಲೀಸರು ನಕಲಿ ಎನ್‌ಕೌಂಟರ್ ಮಾಡುವ ಉದ್ದೇಶದಲ್ಲಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ ರವಿ ಬಂಧನದ ವಿಚಾರವಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕುರಿತು ಕೀಳು ಮಟ್ಟದ ಹೇಳಿಕೆ ನೀಡುವುದು ಪ್ರಹ್ಲಾದ್ ಜೋಶಿ ಅವರ ಸ್ಥಾನಕ್ಕೆ ಗೌರವ ತರುವುದಿಲ್ಲ ಎಂದರು.
ಗಾಂಧಿಜಿ ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ತಯಾರಿ ನಡೆಯುತ್ತಿವೆ. ಈ ಕುರಿತು ಜಿಲ್ಲೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿರುವೆ ಎಂದು ಸಚಿವ ಹೆಚ್.ಕೆ ಪಾಟೀಲ್ ಅಭಿಪ್ರಾಯಪಟ್ಟರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ