ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತವಿಲ್ಲ; ಯಾರಿಗೆ ಏನು ಸೂಚನೆ ಕೊಡಬೇಕೋ ಕೊಟ್ಟಿದ್ದೇವೆ ಎಂದ ಪ್ರಹ್ಲಾದ್ ಜೋಶಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ. ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆಗೆ ಅಭ್ಯರ್ಥಿಗಳನ್ನು ಒಗ್ಗಟ್ಟಾಗಿ ಕಣಕ್ಕಿಳಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 13ರಂದು ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿಯಿಂದ ಅರುಣ್ ಶಹಪುರ್ ಹಾಗೂ ಹನುಮಂತ ನಿರಾಣಿ ಅವರನ್ನು ಕಣಕ್ಕಿಳಿಸಲಾಗಿದೆ. ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತವೂ ಇಲ್ಲ ಎಂದು ಹೇಳಿದರು.
ಬಿಜೆಪಿ ಗೆಲ್ಲಿಸುವುದು ಮಾತ್ರ ನಮ್ಮ ಗುರಿ. ಯಾರಿಗೆ ಏನು ಸೂಚನೆ ಕೊಡಬೇಕೋ ಅದನ್ನು ಕೊಟ್ಟಿದ್ದೇವೆ. ಬಿಜೆಪಿ ಅವಧಿಯಲ್ಲಿ ಶೈಕ್ಷಣಿಕ ಕ್ಷೇತ್ರ ಸಾಕಷ್ಟು ಅಭಿವೃದ್ಧಿಯಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಅತಿ ಹೆಚ್ಚು ಹಣ ಮೀಸಲಿಡಲಾಗಿದೆ. ಎರಡು ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸ್ನೇಹಿತನೊಂದಿಗೆ ಶಾಪಿಂಗ್ ಕಾಂಪ್ಲೆಕ್ಸ್ ಗೆ ಬಂದ ಯುವತಿ; ಕಾಲು ಜಾರಿ ಬಿದ್ದು ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ