Kannada NewsKarnataka NewsLatestPolitics

*ಕಾಂಗ್ರೆಸ್ ಸರ್ಕಾರದ ಕಳ್ಳಾಟ ತೆರೆದಿಟ್ಟ ಸಿಎಜಿ ವರದಿ: ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಕಳ್ಳಾಟವನ್ನು ಸಿಎಜಿ ವರದಿಯೇ ಬಿಚ್ಚಿಟ್ಟಿದೆ. ಜನರ ಹಣವನ್ನು ಹೇಗೆ ರಾಜಾರೋಷವಾಗಿ ಲೂಟಿ ಮಾಡುತ್ತಿದೆ ಎಂಬುದಕ್ಕಿದು ಸ್ಪಷ್ಟ ನಿದರ್ಶನ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.

ರಾಜ್ಯದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಆ ಯೋಜನೆಗಳನ್ನು ಜನಹಿತಕ್ಕಿಂತ ಭ್ರಷ್ಟಾಚಾರಕ್ಕೆ ಬಳಸಿಕೊಳ್ಳುತ್ತಿದೆ. ಅಲ್ಲದೆ, ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಆರ್ಥಿಕತೆಯನ್ನೇ ಹಾಳುಗೆಡವಿದೆ ಎಂದು ಆರೋಪಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಲ್ಲಿ 19,020 ಫಲಾನುಭವಿಗಳಿಗೆ ಕೇವಲ ಒಂದೇ ಒಂದು ಬ್ಯಾಂಕ್ ಖಾತೆ ಜೋಡಿಸಿ, ಜಂಟಿಯಾಗಿ ಕೋಟಿ ಕೋಟಿ ಹಣ ವರ್ಗಾವಣೆ ಮಾಡಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತದ ಪರಮಾವಧಿ ಎಂದು ಖಂಡಿಸಿದ್ದಾರೆ.

ಬ್ಯಾಂಕ್ ಖಾತೆಯ ಕನಿಷ್ಠ ವಿವರಗಳೇ ಇಲ್ಲದ 23,262 ಖಾತೆಗಳಿಗೆ ಬರೋಬ್ಬರಿ ₹46.52 ಕೋಟಿ ಪಾವತಿಸಿರುವುದನ್ನು ಸಿಎಜಿ ವರದಿ ಬಹಿರಂಗಪಡಿಸಿದೆ. ಸಮರ್ಪಕ ಪರಿಶೀಲನೆ ನಡೆಸದೆ, ಕಟ್ಟುನಿಟ್ಟಿನ ನಿಯಮಗಳನ್ನೂ ಪಾಲಿಸದೆ ಹಣ ಜಮೆ ಮಾಡಿರುವುದು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದಿದ್ದಾರೆ ಕೇಂದ್ರ ಸಚಿವರು.

ಯಾವುದೇ ನೀತಿ- ನಿಯಮಗಳನ್ನು ರಚಿಸಿಕೊಳ್ಳದೇ ತರಾತುರಿಯಲ್ಲಿ ಅವೈಜ್ಞಾನಿಕವಾಗಿ ಗ್ಯಾರಂಟಿಗಳನ್ನು ತಂದು ಇದೀಗ ಇಡೀ ರಾಜ್ಯವನ್ನೇ ದಿವಾಳಿಯತ್ತ ಕೊಂಡೊಯ್ಯುತ್ತಿದ್ದಾರೆ. ಇತ್ತ ಜನರಿಗೂ ಸರಿಯಾಗಿ ಹಣ ಜಮಾ ಮಾಡದೆ ಮಹಾ ವಂಚನೆ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹರಿ ಹಾಯ್ದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button