LatestPolitics

*ಎಚ್.ಡಿ.ಕೆ NDAದ ಒಂದು ಭಾಗ, ಆರೋಪವಿದ್ದರೆ ತನಿಖೆಯಾಗಲಿ ಎಂದ ಪ್ರಹ್ಲಾದ್ ಜೋಶಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಗಿಸುವ ಅನುಭವ ಕಾಂಗ್ರೆಸ್ ಗೇ ಹೆಚ್ಚಿದೆ ಬಿಜೆಪಿಗಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.

Home add -Advt

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಏನೇ ಹೇಳಲಿ; ಕುಮಾರಸ್ವಾಮಿ ಅವರು NDAದ ಒಂದು ಭಾಗವಾಗಿದ್ದಾರೆ. NDAದಲ್ಲಿ ಇರುವ ಯಾರನ್ನೂ ಬಿಜೆಪಿ ಮುಗಿಸುವ ಅಥವಾ ಕೈ ಬಿಡುವ ಮಾತೇ ಇಲ್ಲ ಎಂದು ಹೇಳಿದರು.

ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷವನ್ನು ಮುಗಿಸಲು ಬಿಜೆಪಿಯೇ ಷಡ್ಯಂತ್ರ ಮಾಡಿದೆ ಎಂಬ ಕಾಂಗ್ರೆಸ್ ನಾಯಕರನ್ನು ಜೋಶಿ ತರಾಟೆಗೆ ತೆಗೆದುಕೊಂಡರು

ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿ ಕೆಳಗಿಳಿಸಿದವರು ಯಾರು? ಎಂದು ಪ್ರಶ್ನಿಸಿದ ಜೋಶಿ, ಕಾಂಗ್ರೆಸ್ ತನ್ನ ಅನುಭವದ ಮಾತುಗಳನ್ನು ಹೇಳುತ್ತಿದೆ ಅಷ್ಟೇ ಎಂದು ಟಾಂಗ್ ಕೊಟ್ಟರು.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸೇರಿ ಶಾಸಕರ ರಾಜೀನಾಮೆ ಕೊಡಿಸಿ ಜೆಡಿಎಸ್ ಪಕ್ಷ ಮತ್ತು ಕುಮಾರಸ್ವಾಮಿ ಅವರನ್ನು ಮುಗಿಸಲು ಸಂಚು ರೂಪಿಸಿದ್ದು ನೆನಪಿಲ್ಲವೇ? ಎಂದು ಪ್ರಶ್ನಿಸಿದರು.

ತನಿಖೆ ನಡೆಸಲಿ ಮಾಜಿ ಸಿಎಂ ಕುಮಾರಸ್ವಾಮಿ ಅವಧಿಯಲ್ಲಿ ಹಗರಣಗಳು ನಡೆದಿದ್ದರೆ ತನಿಖೆ ನಡೆಸಲಿ. ಎಚ್.ಡಿ.ಕೆ ಅವರೂ ತನಿಖೆ ನಡೆಸಿ ಎಂದಿದ್ದಾರೆ. ತಮ್ಮದೇ ಸರ್ಕಾರವಿದೆ. ತನಿಖೆ ನಡೆಸಿ ಎಂದು ಸವಾಲು ಹಾಕಿದರು.

Related Articles

Back to top button