LatestPolitics

*ಇದು ಐಪಿಎಸ್ ಅಧಿಕಾರಿಯ ಅಹಂಕಾರದ ಪರಮಾವಧಿ; ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವಿನ ಸಮರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಎಡಿಜಿಪಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಎಡಿಜಿಪಿ ಚಂದ್ರಶೇಖರ್, ಹೆಚ್.ಡಿ.ಕೆಯನ್ನು ಪರೋಕ್ಷವಾಗಿ ಹಂದಿಗೆ ಹೋಲಿಸಿರುವ ವಿಚಾರವಾಗಿ ಮಾತನಾಡಿದ ಪ್ರಹ್ಲಾದ್ ಜೋಶಿ, ಒಬ್ಬ ಅಧಿಕಾರಿಯ ಪತ್ರ ಕಾಂಗ್ರೆಸ್ ಗೆ ಮುಳುವಾಗಲಿದೆ. ಗೌರವಯುತ ಪದ ಬಳಕೆ ಮಾಡುವುದು ಅಧಿಕಾರಿಯ ಕರ್ತವ್ಯ. ನಾನು ನೋಡಿದಂತೆ ಹೆಚ್.ಡಿ.ಕೆ ಏಕವಚನದಲ್ಲಿ ಮಾತನಾಡುವವರಲ್ಲ. ಆದರೆ ಅಧಿಕಾರಿ ಕೆಟ್ಟ ಪದ ಬಳಕೆ ಮಾಡಿದ್ದಾರೆ. ಇದು ಅಧಿಕಾರಿಯ ಅಹಂಕಾರದ ಪರಮಾವಧಿ ಎಂದು ಕಿಡಿಕಾರಿದರು.

Home add -Advt

ಅಧಿಕಾರಿಗೆ ಜ್ಞಾನವಿದ್ರೆ ಕ್ಷಮೆಯಾಚಿಸಲಿ. ಕೇಡರ್ ಕಂಟ್ರೋಲ್ ನಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಇದನ್ನು ಯಾವ ಕಾಲಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸರ್ಕಾರ ಖಾಯಂ ಎಂಬ ಭ್ರಮೆಯಲ್ಲಿದ್ದರೆ ಬೆಲೆ ತೆರಬೇಕಾಗುತ್ತದೆ. ಅತ್ಯಂತ ಕೆಟ್ಟ ಭಾಷೆ ಬಳಸಿರುವುದು ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Back to top button