Kannada NewsKarnataka NewsLatestPolitics

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾನೇ; ಪ್ರಹ್ಲಾದ್ ಜೋಶಿ ಸ್ವಯಂ ಘೋಷಣೆ

ಪ್ರಗತಿವಾಹಿನಿ ಸುದ್ದಿ, ಧಾರವಾಡ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾಗುತ್ತಿದ್ದಂತೆ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರಾಗಬಹುದು ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡ ಅಭ್ಯರ್ಥಿ ನಾನೇ ಎಂದು ಬಹಿರಂಗವಾಗಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾನೇ ಎಂದು ಹೇಳಿದ್ದಾರೆ. ಈ ಮೂಲಕ ಜಗದೀಶ್ ಶೆಟ್ಟರ್ ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

Home add -Advt

ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಾಸ್ ಆಗಿದ್ದು ನನಗೆ ಬಹಳ ಖುಷಿಯಾಗಿದೆ. ಈ ಹಿಂದೆಯೇ ಬಿಜೆಪಿಗೆ ಮರಳುವ ಬಗ್ಗೆ ನನ್ನೊಂದಿಗೆ ಚರ್ಚಿಸಿದ್ದರು. ಇಂದು ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಶೆಟ್ಟರ್ ಸಿಕಿದ್ದರು. ಅವರಿಗೆ ವೆಲ್ ಕಮ್ ಬ್ಯಾಕ್ ಎಂದು ಸ್ವಾಗತಿಸಿದ್ದೇನೆ ಎಂದು ಹೇಳಿದರು.

ಇದೇ ವೇಳೆ ಶಾಸಕ ಅರವಿಂದ್ ಬೆಲ್ಲದ್ ಕೂಡ ಧಾರವಾಡ ಲೋಕಸಭಾ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಬಿಟ್ಟರೆ ಬೇರೆ ಯಾರಾಗಲು ಸಾಧ್ಯ? ನಮ್ಮ ನಾಯಕ ಅವರೇ ಎಂದು ಹೇಳಿದ್ದಾರೆ.

ಒಟ್ಟಾರೆ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ನಡುವೆ ಪೈಪೋಟಿ, ಲಾಭಿ ಜೋರಾಗಿದೆ.

Related Articles

Back to top button