Kannada NewsKarnataka NewsLatestPolitics

*ಯಾರಿಗೆ ಸಿಗಲಿದೆ ಮಂಡ್ಯ ಲೋಕಸಭಾ ಟಿಕೆಟ್? ಸೀಟು ಹಂಚಿಕೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಸಂಸದೆ ಸುಮಲತಾ ಬಿಜೆಪಿಯೊಳಗೆ ಇರ್ತಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಸುಮಲತಾ ಬಿಜೆಪಿಯಲ್ಲಿ ಇರುತ್ತಾರೆ ಎಂದಷ್ಟೇ ಪ್ರತಿಕ್ರಿಯಿಸಿದರು.

ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಸಚಿವ ಜೋಶಿ ಸ್ಪಷ್ಟಪಡಿ ಸಿದರು.

ಬಿಜೆಪಿ ರಾಜ್ಯ ಘಟಕ ಮತ್ತು ಜೆಡಿಎಸ್ ರಾಜ್ಯ ಘಟಕದೊಂದಿಗೆ ಇಷ್ಟರಲ್ಲೇ ಹೈಕಮಾಂಡ್ ಮಾತುಕತೆ ನಡೆಸಲಿದೆ. ಬಳಿಕವೇ ಟಿಕೆಟ್ ಹಂಚಿಕೆಯಾಗಲಿದೆ ಎಂದು ಪ್ರಹ್ಲಾದ ಜೋಶಿ ಹೇಳಿದರು.

Home add -Advt

ಸೀಟು ಹಂಚಿಕೆ ಸರಿಯಾಗೇ ಆಗುತ್ತದೆ: ಕುಮಾರಸ್ವಾಮಿ ಅವರು ಯಾವುದಕ್ಕೆ ತಮ್ಮ ವರಿಷ್ಠರನ್ನು ಭೇಟಿ ಮಾಡಿದ್ದಾರೋ ಗೊತ್ತಿಲ್ಲ. ಆದರೆ, ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ಸರಿಯಾಗೇ ಆಗುತ್ತದೆ. ತಮಗೆ ಆ ವಿಶ್ವಾಸವಿದೆ ಎಂದು ಪ್ರತಿಕ್ರಿಯಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button