Politics

*ಇವರೇನು ಕತ್ತೆ ಕಾಯುತ್ತಿದ್ದರಾ?; ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಪ್ರಹ್ಲಾದ್ ಜೋಶಿ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ 2ನೇ ಬಾರಿ ಪತ್ರ ಬರೆದಿದ್ದಾರೆ. ಈ ಬಗ್ಗೆ ಕಲಬುರ್ಗಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪತ್ರ ಬರೆದ ತಕ್ಷಣ ಪಾಸ್ ಪೋರ್ಟ್ ರದ್ದಾಗಬೇಕು ಎಂದರೆ ಹೇಗೆ? ಅದರದ್ದೇ ಆದ ಪ್ರಕ್ರಿಯೆಗಳಿವೆ ಎಂದು ಹೇಳಿದ್ದಾರೆ.

ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೇಂದ್ರ ಸರ್ಕಾರ ಈಗಾಗಲೇ ಕೋರ್ಟ್ ನಲ್ಲಿ ಅರ್ಜಿ ಹಾಕಲಾಗಿದೆ. ಪ್ರಜ್ವಲ್ ಪಾಸ್ ಪೋರ್ಟ್ ಬಗ್ಗೆ ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

ಪತ್ರ ಬರೆದ ತಕ್ಷಣ ಪಾಸ್ ಪೋರ್ಟ್ ರದ್ದಾಗಬೇಕು ಎಂದರೆ ಹೇಗೆ? ಪ್ರಕರಣವನ್ನು ಬಿಜೆಪಿ ಮೇಲೆ ಹಾಕುವ ಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. ತನಿಖೆಗಿಂತ ಹೆಚ್ಚು ರಾಜಕಾರಣವನ್ನು ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಸಹಕಾರ ನೀಡುತ್ತದೆ. ಆದರೆ ನನ್ನ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಪರಮೇಶ್ವರ್ ಉತ್ತರಿಸಿಲ್ಲ. ಪ್ರಜ್ವಲ್ ಪೆನ್ ಡ್ರೈವ್ ಹೊರಬಂದಿದ್ದು ಏಪ್ರಿಲ್ 21ರಂದು. ಪ್ರಜ್ವಲ್ ವಿದೇಶಕ್ಕೆ ಹೋಗಿದ್ದು ಏಪ್ರಿಲ್ 27ರಂದು. ಆತ ವಿದೇಶಕ್ಕೆ ಹೋಗುವವರೆಗೂ ಇವರೇನು ಕತ್ತೆ ಕಾಯುತ್ತಿದ್ದರಾ? ಎಂದು ಪ್ರಶ್ನಿಸಿದ್ದಾರೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ ಗಂಭೀರವಾದ ಪ್ರಕರಣ. ಪ್ರಜ್ವಲ್ ವಿಚಾರಣೆಯನ್ನು ಎದುರಿಸಬೇಕು. ತಪ್ಪು ಮಾಡಿದ್ದೇ ಆದರೆ ಕಠಿಣ ಕ್ರಮ ಆಗಲೇಬೇಕು. ಇದರಲ್ಲಿ ಯಾವುದೇ ಅನುಕಂಪ ಇಲ್ಲ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button