*ಕರ್ನಾಟಕ ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದಕರ, ಉಗ್ರರ ಸ್ವರ್ಗವಾಗುತ್ತಿದೆ; ಪ್ರಹ್ಲಾದ ಜೋಶಿ ವಾಗ್ದಾಳಿ*
ಪಾಕಿಸ್ತಾನ ಜಿಂದಾಬಾದ್, ಹೋಟೆಲ್ ಸ್ಫೋಟ ಘಟನೆ ಎನ್ ಐ ಎ ತನಿಖೆಗೆ ಆಗ್ರಹ
ಪ್ರಗತಿವಾಹಿನಿ ಸುದ್ದಿ: ಮೂಲಭೂತವಾದಿಗಳು ಮತ್ತು ಉಗ್ರ ಚಟುವಟಿಕೆಗಳಿಗೆ ಇಂದು ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಸ್ವರ್ಗವಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದರು.
ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ಹೋಟೆಲ್ ಸ್ಫೋಟಕ್ಕೆ ಸಿಎಂ, ಡಿಸಿಎಂ ನೇರ ಹೊಣೆಗಾರರು ಎಂದು ವಾಗ್ದಾಳಿ ನಡೆಸಿದರು.
ದೇಶದಲ್ಲಿ ಶೇ.90ರಷ್ಟು ಉಗ್ರ ಚಟುವಟಿಕೆ ನಿಗ್ರಹವಾಗಿದೆ. ಆದರೆ, ಈಗ ತಮಗೆ ಬೆಂಬಲ ಸಿಗಬಹುದಾದಂತಹ ರಾಜ್ಯಗಳಲ್ಲಿ ಮತ್ತೆ ತಲೆ ಎತ್ತುತ್ತಿದೆ ಎಂದು ಜೋಶಿ ಕಳವಳ ವ್ಯಕ್ತಪಡಿಸಿದರು.
ಉಗ್ರರ ಸೇಫ್ ಹವೇನ್ ನಿರ್ಮಾಣ ನಿಲ್ಲಿಸಲಿ ಸಿಎಂ:
ಕಾಂಗ್ರೆಸ್ ಆಡಳಿತ ಇರುವುದರಿಂದ ಭಯೋತ್ಪಾದಕರಿಗೆ, ಉಗ್ರರಿಗೆ ಅಟ್ಯಾಕ್ ಮಾಡಲು ಇಂದು ಕರ್ನಾಟಕ ಒಂದೊಳ್ಳೇ ಸುರಕ್ಷಿತ ತಾಣ ಎನಿಸಿದೆ. ಕೇವಲ ವೋಟ್ ಬ್ಯಾಂಕ್ ಗಾಗಿ ಕರ್ನಾಟಕವನ್ನು ಉಗ್ರರ ತಾಣ ಮಾಡಬೇಡಿ. ಮೊದಲು ಸಿಎಂ ಸಿದ್ದರಾಮಯ್ಯ ಮೊದಲು ಇದನ್ನು ನಿಲ್ಲಿಸಿ ಎಂದು ಸಚಿವ ಪ್ರಹ್ಲಾದ ಜೋಶಿ ಖಡಕ್ ಆಗಿ ಹೇಳಿದರು.
ರಾಜ್ಯದಲ್ಲಿ ಆಡಳಿತ- ಆಂತರಿಕ ಭದ್ರತೆ ವೈಫಲ್ಯ:
ವಿಧಾನ ಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ಹೋಟೆಲ್ ಬಾಂಬ್ ಸ್ಫೋಟ ಎರಡೂ ಘಟನೆ ರಾಜ್ಯದಲ್ಲಿ ಆಡಳಿತ ಮತ್ತು ಆಂತರಿಕ ಭದ್ರತೆ ವೈಫಲ್ಯಕ್ಕೆ ನಿದರ್ಶನ ಎಂದು ಆರೋಪಿಸಿದರು.
ಎನ್ ಐಎ ತನಿಖೆಗೆ ವಹಿಸಲು ಪಟ್ಟು : ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ಹೋಟೆಲ್ ಸ್ಫೋಟ ಎರಡೂ ಪ್ರಕಾರಣವನ್ನು ರಾಜ್ಯ ಸರ್ಕಾರk ಕೂಡಲೇ ಎನ್ ಐಎ ತನಿಖೆಗೆ ವಹಿಸಬೇಕು ಎಂದು ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು.
ಎಸ್ ಎಫ್ ಎಲ್ ವರದಿ ದೃಢಪಟ್ಟರೂ ಏಕಿಲ್ಲ ಕ್ರಮ? ಇನ್ನೂ ಎಷ್ಟು ರಕ್ಷಿಸುತ್ತೀರಿ ಸಿದ್ದರಾಮಯ್ಯ?: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಎಸ್ ಎಫ್ ಎಲ್ ವರದಿಯಲ್ಲಿ ದೃಢಪಟ್ಟಿದೆ. ಹಾಗಿದ್ದರೂ ಕ್ರಮ ಕೈಗೊಂಡಿಲ್ಲ ಏಕೆ? ಸಾಲದ್ದಕ್ಕೆ ಮತ್ತಷ್ಟು ವಿಡಿಯೋ ಕಳಿಸಿ ತೀರ್ಮಾನಿಸುತ್ತೇವೆ ಎಂದಿದ್ದೀರಿ. ಅಪರಾಧಿಗಳನ್ನು ಇನ್ನೂ ಎಷ್ಟು ರಕ್ಷಿಸಿಕೊಳ್ಳುತ್ತೀರಿ? ಮಿಸ್ಟರ್ ಸಿಎಂ ಸಿದ್ದರಾಮಯ್ಯ ಎಂದು ಸಚಿವ ಜೋಶಿ ತರಾಟೆಗೆ ತೆಗೆದುಕೊಂಡರು.
ಹೋಟೆಲ್ ಸ್ಫೋಟ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಎಸ್ ಡಿಪಿ ಮತ್ತು ಪಿಎಫ್ ಐ ಮೇಲಿನ ಕೇಸ್ ವಾಪಸು ಪಡೆದು ಕಾಂಗ್ರೆಸ್ ಸರ್ಕಾರ ಅವರ ಪರವಾಗಿ ಇದೆ ಎಂಬ ಸಂದೇಶ ಕೊಟ್ಟ ಪರಿಣಾಮ ಇದೆಲ್ಲಾ ಆಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಆಡಳಿತದಲ್ಲಿ ಕಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿದೆ. ಪರಿಣಾಮ ರಾಜ್ಯದ ಸಾಮಾನ್ಯ ಜನರ ಬದಕು ಅಸುರಕ್ಷಿತವಾಗಿದೆ. ಇದಕ್ಕೆ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಆರೋಪಿಸಿದರು.
ನಾಸಿರ್ ಹುಸೇನ್ ಗೆ ನಾಚಿಕೆ ಆಗಬೇಕು: ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಗೆ ನಾಚಿಕೆ ಆಗಬೇಕು. ಪಾಕಿಸ್ತಾನ ಜಿಂದಾಬಾದ್ ಘೋಷಣೆಗೆ ಕುಮ್ಮಕ್ಕು ನೀಡಿದ್ದಲ್ಲದೆ ಮಾಧ್ಯಮದವರನ್ನೇ ಬೆದರಿಸಿ ಕಳಿಸಿದ್ದಾರೆ ಎಂದು ಸಚಿವ ಜೋಶಿ ಕಿಡಿ ಕಾರಿದರು.
ಜಿಹಾದಿ ರಾಜಕಾರಣಕ್ಕೆ ಬೆಂಬಲ ನೀಡಬೇಕೆ?: ಕಾಂಗ್ರೆಸ್ ವೋಟ್ ಬ್ಯಾಂಕ್ ಗಾಗಿ ದೇಶವನ್ನು ಅಭದ್ರ ಮಾಡುತ್ತಿದೆ. ಇಂಥ ಜಿಹಾದಿ ರಾಜಕೀಯಕ್ಕೆ ನಾವು ಬೆಂಬಲ ನೀಡಬೇಕಾ? ಎಂದು ಪ್ರಶ್ನಿಸಿದ ಜೋಶಿ, ಇದು ಅತ್ಯಂತ ಅಯೋಗ್ಯ ಸರ್ಕಾರ. ಈ ರೀತಿಯ ಚಿಲ್ಲರೆ, ತುಷ್ಟ ರಾಜಕೀಯ ನಿಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯಸ್ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಅಗ್ರಹಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ