Politics

*ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ಬಿಜೆಪಿಗಿಲ್ಲ: ಪ್ರಲ್ಹಾದ ಜೋಶಿ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಅಥವಾ ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಮತದಾರರು ಕಾಂಗ್ರೆಸ್ ಪಕ್ಷಕ್ಕೆ 5 ವರ್ಷ ಜನಾದೇಶ ಕೊಟ್ಟಿದ್ದಾರೆ. ಹಾಗಾಗಿ ನಾವು ಬೀಳಿಸುವ ಪ್ರಶ್ನೆಯೇ ಉದ್ಭವಿಸದು ಎಂದು ಪ್ರತಿಕ್ರಿಯಿಸಿದರು.

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ನಾವು ಅಧಿಕಾರಕ್ಕೆ ಬರುವ ಆಲೋಚನೆ ಬಿಜೆಪಿಗೆ ಇಲ್ಲ. ಕಾಂಗ್ರೆಸ್ ಸರ್ಕಾರ 5 ವರ್ಷ ಸಂಪೂರ್ಣ ಆಡಳಿತ ನಡೆಸಲಿ ಎಂಬುದೇ ಬಿಜೆಪಿಯ ನಿಲುವು, ಆಶಯವಾಗಿದೆ ಎಂದು ಹೇಳಿದರು.

Home add -Advt

ಕಳೆದ ಬಾರಿ ಬಿಜೆಪಿ 104 ಸ್ಥಾನಗಳನ್ನು ಪಡೆದಿತ್ತು. ಕಾಂಗ್ರೆಸ್ 68ಕ್ಕೆ ಇಳಿದಿತ್ತು. ಜನ ಅವರನ್ನು ತಿರಸ್ಕಾರ ಮಾಡಿದ್ದರು. ಆದಾಗ್ಯೂ ಕಾಂಗ್ರೆಸ್ – ಜೆಡಿಎಸ್ ಸೇರಿ ಬೀಜೆಪಿಯನ್ನು ಅಧಿಕಾರದಿಂದ ದೂರವಿಡಲು ಯತ್ನಿಸಿದ್ದರು. ಬಳಿಕ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರಲು ಯತ್ನಿಸಿದರು. ಹಾಗಾಗಿ ಆಗಿನ ಸಂದರ್ಭದಲ್ಲಿ ಬಿಜೆಪಿ ಸಹ ಸರ್ಕಾರ ರಚಿಸಲು ಪ್ರಯತ್ನಿಸಿತು. ಆದರೆ ಈ ಬಾರಿ ಬಿಜೆಪಿ ಅಂಥ ಯಾವುದೇ ಪ್ರಯತ್ನ ನಡೆಸುವುದಿಲ್ಲ ಎಂದು ಹೇಳಿದರು.

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅವರು ಶುದ್ಧರು ಎಂದಾದರೆ ಬೇಕಿದ್ದರೆ ಅವರೇ ಸಿಎಂ ಆಗಿ ಮುಂದುವರಿಯಲಿ. ನಮ್ಮ ಅಭ್ಯಂತರ ಏನಿಲ್ಲ ಎಂದು ಪ್ರಲ್ಹಾದ ಜೋಶಿ ಹೇಳಿದರು.

Related Articles

Back to top button