NationalPolitics

*ಮಮತಾ ಬ್ಯಾನರ್ಜಿ ಡ್ರಾಮಾ ಬಿಟ್ಟು ರಾಜೀನಾಮೆ ನೀಡೋದೇ ಒಳ್ಳೇದು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡುವುದೇ ಒಳ್ಳೆಯದು ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಮಮತಾ ಅವರು ರಾಜೀನಾಮೆಯ ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದರು.

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಆಗಿ ಸರ್ಕಾರ ಮುನ್ನಡೆಸಲು ಅವರು ಸಮರ್ಥರಿಲ್ಲ. ಸಮರ್ಪಕ ಆಡಳಿತ ನೀಡುವಲ್ಲಿ ಅವರು ಅಸಮರ್ಥರಾಗಿದ್ದಾರೆ. ಅಧಿಕಾರ ನೀಡಿದ ಜನರಿಗೆ ನ್ಯಾಯ ಒದಗಿಸುವಲ್ಲಿ ಸಹ ವೈಫಲ್ಯ ಕಂಡಿದ್ದಾರೆ. ಸಮುದಾಯಕ್ಕೆ ಅವಮಾನ ಮಾಡುತ್ತಲೇ ಬಂದಿದ್ದಾರೆ. ಇದೇ ಪ್ರವೃತ್ತಿ ಮುಂದುವರಿಸುವ ಬದಲು ರಾಜೀನಾಮೆ ನೀಡುವುದೇ ಸೂಕ್ತ ಎಂದು ಜೋಶಿ ಅಭಿಪ್ರಾಯಿಸಿದರು.

ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಹೇಳಿಕೆ ಕೇವಲ ಡ್ರಾಮಾ. ಜನರೆದುರು ಈ ರೀತಿ ಕಣ್ಣಾ ಮುಚ್ಚಾಲೆ ಆಡುವುದು ಬೇಡ. ಬದಲಿಗೆ ರಾಜೀನಾಮೆ ನೀಡಲಿ ಎಂದು ಹೇಳಿದರು ಜೋಶಿ.

Home add -Advt

ಅರವಿಂದ ಕೇಜ್ರಿವಾಲ್ ದೋಷಮುಕ್ತರಾಗಿಲ್ಲ: ಇನ್ನು, ದೆಹಲಿ ಸಿಎಂ ಆಗಿದ್ದ ಅರವಿಂದ ಕೇಜ್ರಿವಾಲ್ ಅವರಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ, ಅವರಿನ್ನೂ ದೋಷಮುಕ್ತರಾಗಿ ಹೊರ ಬಂದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button