Kannada NewsLatest

*BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ದಿನಾಂಕ ನಿಗದಿ; ಕೇಂದ್ರ ಸಚಿವ ಜೋಶಿ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿಜೆಪಿ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ಮಾಡಿರುವ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ವರುಣಾದಲ್ಲಿ ನಿಲ್ಲುತ್ತೇನೆ ಎಂದಿದ್ದಾರೆ. ಅಪ್ಪನಿಗಾಗಿ ಮಗ ದೊಡ್ಡ ತ್ಯಾಗ ಮಾಡಿದಂತೆ ಬಿಂಬಿಸುತ್ತಿದ್ದಾರೆ. ವರುಣಾದಲ್ಲಿ ಸೋಲಿನ ಭೀತಿಯಿಂದ ಈಗ ಮತ್ತೊಂದು ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಸಿದ್ದರಾಮಯ್ಯ ರಾಜ್ಯದ 224 ಕ್ಷೇತ್ರಗಳಿಂದಲೂ ಸ್ಪರ್ಧೆ ಮಾಡ್ಲಿ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ಮಾತನಾಡಿದ ಅವರು, ಏಪ್ರಿಲ್ 6 ಅಥವಾ 7ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಈ ಹಿಂದೆ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಟಿಕೆಟ್ ವಿಷಯ ಚರ್ಚೆಯಾಗಿತ್ತು. ಇದೀಗ ಜಿಲ್ಲಾ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಪ್ರತಿ ಕ್ಷೇತ್ರಗಳಿಂದಲೂ ಎರಡು ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ ಗೆ ರವಾನಿಸಲಾಗುತ್ತದೆ ಎಂದರು.

https://pragati.taskdun.com/bjp-mla-n-y-gopalakrishnaresigncongress-join/


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button