Belagavi NewsBelgaum NewsElection NewsKannada NewsKarnataka NewsPolitics
ಜೊಲ್ಲೆ ಪರ ಪ್ರಚಾರಕ್ಕೆ ಬುಧವಾರ ಸದಲಗಾಕ್ಕೆ ಪ್ರಹ್ಲಾದ ಜೋಶಿ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರ ಪ್ರಚಾರಾರ್ಥ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬುಧವಾರ ಸದಲಗಾ ಪಟ್ಟಣಕ್ಕೆ ಆಗಮಿಸಲಿದ್ದಾರೆ.
ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಸಂಜೆ 5 ಗಂಟೆಗೆ ಸದಲಗಾ ಪಟ್ಟಣದ ಹಳೆ ಬಸ್ ನಿಲ್ದಾಣದ ಆವರಣಲ್ಲಿ ಪ್ರಲ್ಹಾದ ಜೋಶಿ ಬಹಿರಂಗ ಸಭೆಯಲ್ಲಿ ಮಾತನಾಡುವರು.
ಈ ಸಭೆಯಲ್ಲಿ ಜಿಲ್ಲೆಯ ಸಂಸದರು, ಮಾಜಿ ಸಂಸದರು,ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಂಡಲ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಪುರಸಭೆ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಪಕ್ಷದ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿರುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ