Kannada NewsKarnataka NewsNationalPolitics

*ಭಾರತಕ್ಕೆ ಬರಲು ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೆವಣ್ಣ *

ಪ್ರಗತಿವಾಹಿನಿ ಸುದ್ದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣದ ಆರೋಪದ ಹಿನ್ನೆಲೆ ವಿದೇಶಕ್ಕೆ ತೆರಳಿ ತಮ್ಮ ಹೇಳಿಕೆಯಂತೆ ಮೇ 31ರಂದು ಭಾರತಕ್ಕೆ ವಾಪಸ್ಸಾಗುತ್ತಿರುವ ಪ್ರಜ್ವಲ್ ರೇವಣ್ಣ ಇದೀಗ ಜರ್ಮಿನಿಯಿಂದ ಬೆಂಗಳೂರಿಗೆ ಬರಲು ಲುಫ್ತಾನ್ಸಾ ಏರ್ಲೈನ್ಸ್ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿದ್ದಾರೆ.

Home add -Advt

ಮೇ 31ರಂದು ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲದೆ ಮೇ 31ರ ಬೆಳಗ್ಗೆ 10:30ಕ್ಕೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಆದರೆ ಪ್ರಜ್ವಲ್ ರೇವಣ್ಣ ಟಿಕೆಟ್ ಬುಕ್ ಮಾಡಿರುವ ವಿಮಾನ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಮೇ 31ರ ಮಧ್ಯರಾತ್ರಿ 12:30ಕ್ಕೆ ಆಗಮಿಸಲಿರುವುದರಿಂದ ಜೂನ್ 1ಕ್ಕೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ವಿಚಾರಣೆ ನಡೆಸುತ್ತಿರುವ ಎನ್ಐಟಿ ತಂಡ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಎಸ್ಐಟಿ ಅಧಿಕಾರಿಗಳು ಬಂಧಿಸುವ ಎಲ್ಲಾ ಸಾಧ್ಯತೆಗಳಿವೆ.

Related Articles

Back to top button