
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಯಾಗುವ ಮೂಲಕ ರಾಜ್ಯ ರಾಜಕಾರಣಕ್ಕೆ ಧುಮಕಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಸೇರ್ಪಡೆ ವಿಚಾರವಾಗಿ ಸುಮಲತಾ ಇದೇ ನಿರ್ಧಾರ ಪ್ರಕಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ನಡೆಯಲಿರುವ ಸಂಸದರ ಸುದ್ದಿಗೋಷ್ಠಿ ತೀವ್ರ ಕುತೂಹಲ ಮೂಡಿಸಿದೆ.
ಬೆಂಗಳೂರಿನಿಂದ ಮಂಡ್ಯಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಸದೆ ಸುಮಲತಾ, ರಾಜಕೀಯದ ಮುಂದಿನ ನಡೆಯ ಬಗ್ಗೆ ಮಂಡ್ಯದಲ್ಲಿಯೇ ತಿಳಿಸುತ್ತೇನೆ. ನನ್ನ ಜನ, ನನ್ನ ಜಿಲ್ಲೆಯಲ್ಲಿಯೇ ಎಲ್ಲಾ ವಿಚಾರಗಳ ಬಗ್ಗೆ ಹೇಳುತ್ತೇನೆ ಎಂದಿದ್ದಾರೆ.
ಈವರೆಗೆ ಏನೆಲ್ಲಾ ಆಯಿತು, ನನ್ನ ಮನಸ್ಸಿನಲ್ಲಿ ಏನಿದೆ ಎಲ್ಲಾ ವಿಚಾರಗಳು ತಿಳಿಸುತ್ತೇನೆ. ಮಂಡ್ಯದಲ್ಲಿಯೇ ನನ್ನ ಮುಂದಿನ ತೀರ್ಮಾನ ಘೋಷಣೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಈ ಮೂಲಕ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಮೂಲಕ ರಾಜ್ಯ ರಾಜಕಾರಣಕ್ಕೆ ಧುಮಕಲಿದ್ದು, ಮಂಡ್ಯದಿಂದ ಬಿಜೆಪಿ ಅಭ್ಯರ್ಥಿಯಾಗಿ ಮುಂಬರುವ ವಿಧನಾಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸುಮಲತಾ ನಡೆಸಲಿರುವ ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ ನೆಟ್ಟಿದೆ.