ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ವಿದೇಶದಲ್ಲಿದ್ದುಕೊಂಡೇ ವಕೀಲರ ಸಲಹೆ ಪಡೆಯುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಪ್ರಕರಣ ಬೆಳಕಿಗೆ ಬಂದ ಸಂದರ್ಭದಲ್ಲೇ ವಿದೇಶಕ್ಕೆ ತೆರಳಿರುವ ಪ್ರಜ್ವಲ್, ಏಪ್ರಿಲ್ 27ರಿಂದ ಇಲ್ಲಿವರೆಗೂ ವಿದೇಶದಲ್ಲಿದ್ದುಕೊಂಡೇ ಕಾನೂನು ತಜ್ಞರ ಜೊತೆ ನಿರಂತರ ಸಂಪರ್ಕ ಹೊಂದಿದ್ದಾರೆ. ದೆಹಲಿ, ಬೆಂಗಳೂರಿನ ನುರಿತ ವಕೀಲರ ಜೊತೆ ಸಂಪರ್ಕ ಇಟ್ಟುಕೊಂಡಿದ್ದಾರೆ. ಈ ಮಧ್ಯೆ, ವಕೀಲರ ಸಲಹೆಯಂತೆ ಮೇ 10ರೊಳಗೆ ದೇಶಕ್ಕೆ ಬಂದು ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ