Kannada NewsKarnataka NewsPolitics

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ಬಂಧನ 

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ.

ಪ್ರಜ್ವಲ್ ರೇವಣ್ಣರ ವಿಡಿಯೋ ಮತ್ತು ಫೋಟೋಗಳನ್ನು ಅಪ್ಲೋಡ್ ಮಾಡಿದ್ದ ಟ್ರೋಲ್ ಪೇಜ್ ಅಡ್ಮಿನ್ ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬಾತನನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ. 

Home add -Advt

ಆರೋಪಿ ಪ್ರಜ್ವಲ್, ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದನು. ಈ ಸಂಬಂಧ ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪ್ರಜ್ವಲ್​ ಟ್ರೋಲ್ ಪೇಜ್ ಅಡ್ಮಿನ್ ಸಹ ಆಗಿದ್ದಾನೆ.

Related Articles

Back to top button