
ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರೆಅತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ.
ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಬೇಕಿತ್ತು. ಆದರೆ ಎಸ್ ಐ ಟಿ ಪರ ಹಾಗೂ ಪ್ರಜ್ವಲ್ ಪರ ಎರಡೂ ಕಡೆ ವಕೀಲರಿಂದ ಕೆಲ ಸ್ಪಷ್ಟೀಕರಣ ಕೇಳಿರುವ ನ್ಯಾಯಾಲಯ ತೀರ್ಪನ್ನು ಆಗಸ್ಟ್ 1ರಂದು ಪ್ರಕಟಿಸುವುದಾಗಿ ತಿಳಿಸಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೂಗಲ್ ಮ್ಯಾಪ್ ನ್ನು ಸಾಕ್ಷಿಯನ್ನಾಗಿ ಪರಿಗಣಿಸಬಹುದೇ? ಸ್ಯಾಮ್ಸಂಗ್ ಮೊಬೈಲ್ ಫೋನ್ ಮ್ಯಾಪ್ ನ್ನು ಸಾಕ್ಷೀಕರಿಸಬಹುದೇ ಎಂಬುದನ್ನು ಸ್ಪಷ್ಟೀಕರಣ ನೀಡುವಂತೆ ಎರಡೂ ಕಡೆಯ ವಕೀಲರಿಗೆ ಕೋರ್ಟ್ ಸೂಚಿಸಿದೆ. ಪ್ರಕರಣದ ಬಗ್ಗೆ ಯಾವುದೇ ವಾದ-ಪ್ರತಿವಾದದ ಅಗತ್ಯವಿಲ್ಲ ಆದರೆ ಗೂಗಲ್ ಮ್ಯಾಪ್ ಸಾಕ್ಷೀಕರಿಸಬಹುದೇ ಎಂಬ ಬಗ್ಗೆ ಸ್ಪಷ್ಟೀಕರಣ ಮಾತ್ರ ನೀಡುವಂತೆ ಕೋರ್ಟ್ ಸೂಚಿಸಿದೆ. ತೀರ್ಪನ್ನು ಆಗಸ್ಟ್ 1ಕ್ಕೆ ಕಾಯ್ದಿರಿಸಿ ಆದೇಶ ಹೊರಡಿಸಿದೆ.