Kannada NewsKarnataka NewsLatestPolitics
*ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಕುರಿತ ತೀರ್ಪು ಮಧ್ಯಾಹ್ನ ಕಾಯ್ದಿರಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಕೆ.ಆರ್.ನಗರ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿರುವ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಇಂದು ಮಧ್ಯಾಹ್ನ ಪ್ರಕಟಿಸುವುದಾಗಿ ಕಾಯ್ದಿರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್, ನಿನ್ನೆ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ತೀರ್ಪು ನೀಡಿದ್ದರು. ಇಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದ್ದರು. ಇಂದು ಅರ್ಜಿ ವಿಚಾರಣೆ ವೇಳೆ ಎರಡೂ ಕಡೆಯ ವಕೀಲರಿಂದ ಅಂತಿಮ ವಾದ-ಪ್ರತಿವಾದ ಹಾಗೂ ಅಪರಾಧಿ ಹೇಳಿಕೆ ದಾಖಲಿಸಿಕೊಳ್ಳಲಾಗಿದ್ದು, ಬಳಿಕ ಮಧ್ಯಾಹ್ನ 2:45ಕ್ಕೆ ಶಿಕ್ಷೆ ಪ್ರಮಾಣದ ತೀರ್ಪು ಪ್ರಕಟಿಸುವುದಾಗಿ ಕಾಯ್ದಿರಿಸಿದ್ದಾರೆ.