
ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರೋಲ್ ಪೇಜ್ ಅಡ್ಮಿನರ್ ಓರ್ವನನ್ನು ಚಿಕ್ಕಮಗಳೂರಿನ ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಈತ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳನ್ನು ಫೇಸ್ ಬುಕ್, ಇನ್ ಸ್ಟಾಗ್ರಾಂ, ಯುಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದ.
ಈತನ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಟಿ ಕೇಸ್ ನಡಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿ ಟ್ರೋಲ್ ಪೇಜ್ ಅಡ್ಮಿನರ್ ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ