Kannada NewsKarnataka NewsLatest

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಬಿಜೆಪಿ ಮಾಜಿ ಶಾಸಕನ ಆಪ್ತ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಆಡಳಿತ ಹಾಗೂ ವಿಪಕ್ಷ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಈ ನಡುವೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕರ ಆಪ್ತರನ್ನು ಬಂಧಿಸಿದೆ.

ಪ್ರಜ್ವಲ್ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತ ಲಿಖಿತ್ ಹಾಗೂ ಕಚೇರಿ ಸಿಬ್ಬ್ಂದಿ ಚೇತನ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

ಇನ್ನೊಂದೆಡೆ ಆರೋಪಿಗಳಾದ ನವೀನ್ ಗೌಡ ಹಾಗೂ ಪುಟ್ಟರಾಜು ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕುರಿತು ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button