ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಸಿದಂತೆ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ರಾಹುಲ್ ಗಾಂಧಿ, ಸಂತ್ರಸ್ತೆಯರಿಗೆ ಸರ್ಕಾರ ರಕ್ಷಣೆ ನಿಡಬೇಕು. ಆರೋಪಿ ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸಹೋದರಿಯರು, ತಾಯಿಯರಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿದ್ದಾರೆ. ಇಷ್ಟೆಲ್ಲ ಆದಾಗ್ಯೂ ವಿಷಯ ಗೊತ್ತಿದ್ದರೂ ಪ್ರಧಾನಿ ಮೋದಿ ಪ್ರಜ್ವಲ್ ಪರ ಪ್ರಚಾರ ನಡೆಸಿದ್ದಾರೆ. ಈಗ ಭಾರತದಿಂದ ಪಾರಾಗಲು ಅನುವುಮಾಡಿಕೊಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.
ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಕೀಲ ದೇವರಾಜೇಗೌಡ ಮೊದಲೇ ಮಾಹಿತಿ ನೀಡಿದ್ದರು. ಆದರೂ ಪ್ರಜ್ವಲ್ ಗೆ ಟಿಕೆಟ್ ನೀಡಿರುವುದೇ ಒಂದು ಆಘಾತಕಾರಿ ವಿಷಯ. ಈ ಪ್ರಕರಣಗಳ ಬಗ್ಗೆ ಪ್ರಧಾನಿ ಮೋದಿಯವರ ಗಮನಕ್ಕೆ ತಂದರೂ ಅವರು ಕೂಡ ಪ್ರಜ್ವಲ್ ಪರ ಪ್ರಚಾರ ನಡೆಸಿದ್ದು ನನಗೆ ಮತ್ತೊಂದು ಶಕ ಆಗಿದೆ. ಉದ್ದೇಶಪೂರ್ವಕವಾಗಿ ಪ್ರಜ್ವಲ್ ಭಾರತದಿಂದ ಪಾರಾಗಲು ಕೇಂದ್ರ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಈ ಹಿಂದೆ ಹರಿಯಾಣ ಕುಸ್ತಿಪಟುಗಳು, ಮಣಿಪುರ ಘಟನೆ ನ್ಡೆದಾಗಲೂ ಪ್ರಧಾನಿ ಮೋದಿ ಮೌನವಾಗಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಅಂದಿರು, ಸಹೋದರಿಯರ ಪರವಾಗಿ ಹೋರಾಟ ಮಾಡಬೇಕಿರುವುದು ಕಾಂಗ್ರೆಸ್ ಕರ್ತವ್ಯ. ಈಗಾಗಲೇ ರಾಜ್ಯ ಸರ್ಲಾರ ಎಸ್ ಐಟಿ ರಚನೆ ಮಾಡಿದೆ. ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡಲು ಮನವಿ ಮಡಿದೆ. ಆರೋಪಿಯನ್ನು ವಿದೇಶದಿಂದ ಕರೆತಂದು ಶಿಕ್ಷೆ ನೀಡಬೇಲು ಎಂದು ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ