Kannada NewsKarnataka NewsLatestPolitics

*ಪ್ರಜ್ವಲ್ ರೇವಣ್ಣ, ಹೆಚ್.ಡಿ.ರೇವಣ್ಣಗೆ ಸಂಕಷ್ಟ; ಎಸ್ ಐಟಿಯಿಂದ ತನಿಖೆ ಚುರುಕು*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವರ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನು ರಾಜ್ಯ ಸರ್ಕಾರ ಎಸ್ ಐಟಿಗೆ ವರ್ಗಾವಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸಂಕಷ್ಟ ಎದುರಾಗಿದೆ.

ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ ಪಿ ಸೀಮಾ ಲಾಟ್ಕರ್, ಸುಮನ್ ಡಿ. ಪನ್ನೇಕರ್ ಹಾಗೂ ಇನ್ಸ್ ಪೆಕ್ಟರ್ ಗಳನ್ನು ಒಳಗೊಂಡ ಎಸ್ ಐಟಿ ತಂಡ ತನಿಖೆ ಆರಂಭಿಸಿದ್ದು, ಇಂದು ಹಾಸನಕ್ಕೆ ಭೇಟಿ ನೀಡಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕಲೆ ಹಾಕಲಿದ್ದು, ಹೆಚ್.ಡಿ.ರೇವಣ್ಣ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಇನ್ನೊಂದೆಡೆ ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಹೆಚ್.ಡಿ.ರೇವಣ್ಣ ಕಾನೂನು ಹೋರಾಟಕ್ಕೆ ತೀರ್ಮಾನಿಸಿದ್ದಾರೆ. ಈ ನಿಟ್ಟಿನಲ್ಲಿ ವಕೀಲರನ್ನು ಭೇಟಿಯಾಗಿ ಚರ್ಚಿಸಿದ್ದು, ನಿರೀಕ್ಷಣಾ ಜಾಮೀನು ಪಡೆಯುವ ನಿಟ್ಟಿನಲ್ಲಿ ಚರ್ಚಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button