
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2022-23ನೇ ಸಾಲಿನ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರೈತರಿಗಾಗಿ ರೈತ ಶಕ್ತಿ ಎಂಬ ಹೊಸ ಯೋಜನೆ ಘೋಷಿಸಿದ್ದಾರೆ.
ತಮ್ಮ ಚೊಚ್ಚಲ ಬಜೆಟ್ ಮಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೃಷಿ ಹಾಗೂ ಪೂರಕ ಚಟುವಟಿಕೆಗಳಿಗಾಗಿ ಬರೋಬ್ಬರಿ 33,700 ಕೋಟಿ ಅನುದಾನ ಮೀಸಲಿಟ್ಟಿದ್ದಾಗಿ ತಿಳಿಸಿದರು. ಇದೇ ವೇಳೆ ರೈತ ಶಕ್ತಿ ಎಂಬ ಹೊಸ ಯೋಜನೆ ಘೋಷಿಸಿದರು.
ಈ ಯೋಜನೆಗಾಗಿ 600 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಈ ಯೋಜನೆಯಡಿಯಲ್ಲಿ ಡೀಸೆಲ್ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.
ಕರ್ನಾಟಕ ಬಜೆಟ್: ಬೆಳಗಾವಿಯಲ್ಲಿ ಕಿದ್ವಾಯಿ ಆಸ್ಪತ್ರೆ, ಅಥಣಿಯಲ್ಲಿ ಹೊಸ ಕೃಷಿ ಕಾಲೇಜು; ಕೃಷಿಗೆ 33,700 ಕೋಟಿ ಘೋಷಣೆ