ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣ ಆರೋಪಿ ಸಂಸದ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡಲಾಗುವುದು ಎಂದು ಜನತಾ ಪಕ್ಷ ಘೋಷಿಸಿದೆ.
ಪ್ರಜ್ವಲ್ ರೇವಣ್ಣ ಬಗ್ಗೆ ಸುಳಿವು ನೀಡಿ, ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ಎಂಬ ಅಭಿಯಾನ ಆರಂಭಿಸಿರುವ ಜನತಾ ಪಕ್ಷದ ಕಾರ್ಯಕರ್ತರು, ಬೆಂಗಳೂರಿನ ಶಿವಾನಂದ ಸರ್ಕಲ್ ಸೇರಿದಂತೆ ವಿವಿಧೆಡೆ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ.
ಶಿವಾನಂದ ಸರ್ಕಲ್ ಬಳಿ ಪೋಸ್ಟರ್ ಅಂಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ನಾಗೇಶ್, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿದೆ. ಆತ ತಲೆಮರೆಸಿಕೊಂಡಿದ್ದು, ಆತನನ್ನು ಹುಡುಕಿಕೊಟ್ಟವರಿಗೆ ಜನತಾ ಪಕ್ಷ 1 ಲಕ್ಷ ರೂಪಾಯಿ ಬಹುಮಾನ ನೀಡಲಿದೆ ಎಂದು ಘೋಷಿಸಿದ್ದಾರೆ.
ಇದೇ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ನಾಗೇಶ್ ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ