LatestPolitics

*ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಅಪಹರಣ ಪ್ರಕರಣದ ಸಂತ್ರಸ್ತೆಯೇ ಇದೀಗ ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಕೇಸ್ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತೆಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಸೆಕ್ಷನ್ 164 ಅಡಿ ಹೇಳಿಕೆ ದಾಖಲಿಸಿದ್ದಾರೆ.

ಚನ್ನರಾಯಪಟ್ಟಣದ ಗನ್ನಿಕಡ ತೋಟದ ಮನೆಯಲ್ಲಿ ತೋಟದ ಕೆಲಸ ಮಾಡುವಾಗ ಅತ್ಯಚಹಾರವೆಸಗಲಾಗಿದೆ ಎಂದು ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಗನ್ನಿಕಡ ಮನೆಯಲ್ಲಿ ಸ್ಥಳಮಹಜರು ನಡೆಸಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.

Home add -Advt


Related Articles

Back to top button