ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋಗಳ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ದೇಶ ತೊರೆದಿದ್ದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ, ಕಡೆಗೂ ಬೆಂಗಳೂರಿಗೆ ವಾಪಾಸ್ಸಾಗಿದ್ದು, ಮಧ್ಯರಾತ್ರಿ ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ.
ಜರ್ಮಿನಿಯ ಮ್ಯೂನಿಕ್ ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗುರುವಾರ ಮಧ್ಯರಾತ್ರಿ ಆಗಮಿಸುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದರು. ಲುಕ್ ಔಟ್ ನೋಟಿಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಇಮ್ಮಿಗ್ರೇಶನ್ ಅಧಿಕಾರಿಗಳು ಪ್ರಜ್ವಲ್‌ನನ್ನು ವಶಕ್ಕ ಪಡೆದು ಎಸ್ ಐ ಟಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಕಳೆದ 35 ದಿನಗಳಿಂದ ವಿದೇಶದಲ್ಲಿ ಅಡಗಿ ಕೂತಿದ್ದ ಪ್ರಜ್ವಲ್ ಮೇ 31ಕ್ಕೆ ಎಸ್‌ಐಟಿ ವಿಚಾರಣೆಗೆ ಹಾಜರಾಗೋದಾಗಿ ವಿಡಿಯೋ ಬಿಡುಗಡೆ ಮಾಡಿದ್ದರು. ಇದೀಗ ರಾಜ್ಯಕ್ಕಾಗಮಿಸಿರುವ ಪ್ರಜ್ವಲ್ ಮುಂದಿನ ಕಾನೂನು ಪ್ರಕ್ರಿಯಯನ್ನು ಎದುರಿಸಬೇಕಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ