ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ.
ಪ್ರಜ್ವಲ್ ರೇವಣ್ಣ್ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣ, ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಮೂರು ಪ್ರಕರಣಗಳು ದಾಖಲಾಗಿವೆ. ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಮೊದಲ ಕೇಸ್ ದಾಖಲಾಗಿತ್ತು. ಈಗಾಗಲೇ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪ್ರಜ್ವಲ್ ವಿರುದ್ಧ ಎಸ್ ಐಟಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ಈನಡುವೆ ಪ್ರಜ್ವಲ್ ರೇವಣ್ಣ ಮೊದಲ ಕೇಸ್ ನಲ್ಲಿ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ , ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ