
ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಶಾಕ್ ನೀಡಿದೆ.’
ತನ್ನ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ರದ್ದುಗೊಳಿಸುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ವಜಾಗೊಳಿಸಿದೆ.
ಪ್ರಕರಣದ ವಿಚಾರಣೆಯನ್ನು ಏಪ್ರಿಲ್ ೯ಕ್ಕೆ ಮುಂದೂಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳಿದ್ದು, ನಾಲ್ಕು ಪ್ರಕರಣಗಳ ಜಾಮೀನು ಅರ್ಜಿಗಳನ್ನು ಕೋರ್ಟ್ ವಜಾಗೊಳಿಸಿದೆ.