
ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದೆ.
ಜರ್ಮನಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ತಡ ರಾತ್ರಿ ಏರ್ ಪೋರ್ಟ್ ನಲ್ಲಿಯೇ ಪ್ರಜ್ವಲ್ ನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಪ್ರಾಥಮಿಕ ವಿಚಾರಣೆ ಬಳಿಕ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
ಮೆಡಿಕಲ್ ಟೆಸ್ಟ್ ಬಳಿಕ ಪ್ರಜ್ವಲ್ ನನ್ನು ಎಸ್ ಐಟಿ ತನಿಖಾಧಿಕರಿ ಸುಮನಾ ಡಿ ಪೆನ್ನೇಕರ್ ನೇತೃತ್ವದಲ್ಲಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ಕಸ್ಟಡಿಗೆ ನೀಡುವಂತೆ ಕೋರಿದ್ದಾರೆ. ಕೆಲವೇ ಹೊತ್ತಲ್ಲಿ ವಿಚಾರಣೆ ಆರಂಭವಾಗಲಿದೆ
ಪ್ರಜ್ವಲ್ ರೇವಣ್ಣ ಎಸ್ ಐಟಿ ಕಸ್ಟಡಿಗೋ ಅಥವಾ ಜೈಲುಪಾಲಾಗಲಿದ್ದಾರೋ ಎಂಬುದು ಕಾದುನೋಡಬೇಕಿದೆ.