Kannada NewsKarnataka NewsPolitics

*ಹೆಚ್.ಡಿ.ರೇವಣ್ಣ ವಿಚಾರಣೆಗೆ ಹಾಜರಾಗದಿದ್ದರೆ ಅರೆಸ್ಟ್; ಗೃಹ ಸಚಿವ ಡಾ.ಜಿ.ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹೆಚ್.ಡಿ ರೇವಣ್ಣ ಹಾಗೂ ಎರಡನೇ ಆರೋಪಿ ಪ್ರಜ್ವಲ್ ರೇವಣ್ಣ ಇಬ್ಬರಿಗೂ ವಿಚರಾಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಇಂದು ಹೆಚ್.ಡಿ.ರೇವಣ್ಣ ಎಸ್ ಐ ಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಎಐಟಿ ರಚನೆ ಆಗಿದ್ದು, ತನಿಖೆ ಚುರುಕುಗೊಂಡಿದೆ ಎಂದರು.

ಇಂದು ಆರೋಪಿ ಹೆಚ್.ಡಿ.ರೇವಣ್ಣ ಎಐಟಿ ಮುಂದೆ ಹಾಜರಾಗದಿದ್ದರೆ ಅವರನ್ನು ಬಂಧಿಸಲಾಗುವುದು ಎಂದರು.

ಎರಡನೇ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದು ಸತ್ಯ. ಕೇಂದ್ರ ಸರ್ಕಾರವೇ ಡಿಪ್ಲೊಮ್ಯಾಟಿಕ್ ಪಾಸ್ ಪೋರ್ಟ್ ನೀಡಿದೆ. ಹಾಗಾಗಿ ವಿದೇಶಕ್ಕೆ ತೆರಳಿದ್ದಾರೆ. ಅವರನ್ನು ಶೀಘವೇ ಕರೆ ತರಲಾಗುವುದು ಎಂದರು. ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟೀಸ್ ನೀಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಬಂದರುಗಳಿಗೂ ನೋಟೀಸ್ ನೀಡಲಾಗಿದೆ ಎಂದರು.


Related Articles

Back to top button