Kannada NewsKarnataka NewsLatest

*ಸಂಸದ ಪ್ರಜ್ವಲ್ ರೇವಣ್ಣ ಮನೆಗೆ ಬೀಗ ಹಾಕಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಜ್ವಲ್ ರೇವಣ್ಣ ಸರ್ಕಾರಿ ಮನೆಗೆ ಬೀಗ ಹಾಕಿರುವ ಘಟನೆ ನಡೆದಿದೆ.

ಸಂಸದರ ನಿವಾಸದಲ್ಲಿಯೇ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ ಮಾಡಿರುವ ಬಗ್ಗೆ ಸಂತ್ರಸ್ತೆ ದೂರು ಹಿನ್ನೆಲೆಯಲ್ಲಿ ಎಸ್ ಐಟಿ ಸಂಸದರ ಮನೆಯನ್ನು ಸುಪರ್ಧಿಗೆ ಪಡೆಯುವ ಸಾಧ್ಯತೆ ಇದೆ. ಸಾಕ್ಷಿ ನಾಶ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ಹಾಸನದ ಆರ್.ಸಿ.ಬಡಾವಣೆಯಲ್ಲಿರುವ ಸರ್ಕಾರಿ ನಿವಾಸದ ಗೇಟ್ ಗೆ ಪೊಲೀಸರು ಬೀಗ ಹಾಕಿದ್ದಾರೆ.

ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ನಡುವೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಎ1 ಆರೋಪಿ ಹೆಚ್.ಡಿ.ರೇವಣ್ಣ ಅಜ್ಞಾತ ಸ್ಥಳದಲ್ಲಿ ಅಡಗಿದ್ದಾರೆ ಎಂದು ಹೇಳಲಾಗುತ್ತಿದೆ.

Related Articles

Back to top button