CrimeKarnataka NewsLatest

*ಆರೋಪಿ ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದಿನಕ್ಕೊಂದು ರೀತಿ ಸುದ್ದಿಯಾಗುತ್ತಿದ್ದಾರೆ. ಜೈಲಿನಲ್ಲಿ ಇದೀಗ ಪ್ರಜ್ವಲ್ ಬಳಿ ಮತ್ತೊಂದು ಮೊಬೈಲ್ ಪತ್ತೆಯಾಗಿದೆ.

ಕೆಲ ದಿನಗಳ ಹಿಂದೆ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿದಾಗ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ ಡ್ರೈವ್, ನೋಟ್ ಬುಕ್ ಪತ್ತೆಯಾಗಿತ್ತು. ಇದನ್ನು ಗಂಭೀರವಗೈ ಪರಿಗಣಿಸಿದ್ದ ಪೊಲೀಸರು ಪ್ರಜ್ವಲ್ ನನ್ನು ಬೇರೆ ಸೆಲ್ ಗೆ ಸ್ಥಳಾಂತರಿಸಿ, ಎಲ್ಲಾ ಸೌಲಭ್ಯಗಳನ್ನು ಸ್ಥಗಿತಗೊಳಿಸಿದ್ದರು.

ಇಷ್ಟಾಗ್ಯೂ ಪ್ರಜ್ವಲ್ ರೇವಣ್ಣ ಬಳಿ ಮತ್ತೆ ಮೊಬೈಲ್ ಪತ್ತೆಯಾಗಿದೆ. ಪೊಲೀಸರು ಪ್ರಜ್ವಲ್ ಸೆಲ್ ಮೇಲೆ ದಾಳಿ ನಡೆಸಿದಾಗ ಮತ್ತೊಂದು ಮೊಬೈಲ್ ಸಿಕ್ಕಿದೆ. ದೇವರ ಫೋಟೊ‌ ಹಿಂದೆ ಇರಿಸಲಾಗಿದ್ದ ವಿವೋ ಕಂಪನಿಯ ಮೊಬೈಲ್ ಪತ್ತೆಯಾಗಿದೆ. ಮೊಬೈಲ್ ನಲ್ಲಿ ಯಾವುದೇ ಸಿಮ್ ಇಲ್ಲದೆ ಸ್ವಿಚ್ ಆಫ್ ಆಗಿತ್ತು ಎಂದು ತಿಳಿದುಬಂದಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button