Latest

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಎಂಗೆ ಪತ್ರ ಬರೆದ ಮೇನಕಾ ಗಾಂಧಿ

ಪ್ರಗತಿವಾಹಿನಿ ಸುದ್ದಿ; ಹಾಸನ: ಆನೆಯನ್ನು ಕೊಂದು ದಂತ ಮಾರಾಟ ಪ್ರಕರಣದಲ್ಲಿ ಸಿಕ್ಕಿ ಬಿದ್ದ ಆರೋಪಿಗಳ ರಕ್ಷಣೆಗಾಗಿ ಸಂಸದ ಪ್ರಜ್ವಲ್ ರೇವಣ್ಣ ಒತ್ತಡ ಹೇರುತ್ತಿದ್ದಾರೆ ಎಂದು ಸಂಸದೆ ಮೇನಕಾ ಗಾಂಧಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಹಾಸನ ಜಿಲ್ಲೆಯ ವೀರಾಪುರದಲ್ಲಿ ಆರೋಪಿ ಚಂದ್ರೇಗೌಡ ಎಂಬುವವರು ಅಕ್ರಮವಾಗಿ ವಿದ್ಯುತ್ ಹರಿಸಿ ಸಲಗವೊಂದನ್ನು ಕೊಂದು ಹೂತಿದ್ದರು. ಬಳಿಕ ಸತ್ತ ಆನೆಯ ದಂತ ಕತ್ತರಿಸಿ ಮಾರಾಟ ಮಾಡಲು ಮುಂದಾಗಿದ್ದರು. ಈ ವೇಳೆ ಆರೋಪಿಗಳು ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದರು. ಈ ಬಗ್ಗೆ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ.

ಆದರೆ ಪ್ರಕರಣದ ಆರೋಪಿ ಚಂದ್ರೇಗೌಡ ಎಂಬುವವರು ಜೆಡಿಎಸ್ ಬೆಂಬಲಿಗರು ಎಂಬ ಕಾರಣಕ್ಕಾಗಿ, ಸಂಸದ ಪ್ರಜ್ವಲ್ ರೇವಣ್ಣ ಇದೀಗ ಆರೋಪಿ ರಕ್ಷಣೆಗೆ ಒತ್ತಡ ಹೇರುತ್ತಿದ್ದಾರೆ. ಈ ನಿಟ್ಟಿನಲ್ಲಿ ಸ್ಥಳೀಯ ವಲಯ ಅರಣ್ಯಾಧಿಕಾರಿ ಭಾರಿ ಭ್ರಷ್ಟಾಚಾರ ನಡೆಸಿದ್ದಾರೆ. ಹಾಸನ ಅರಣ್ಯ ಇಲಾಖೆ ಆರ್ ಎಫ್ ಒ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳಾದ ಬೊಮ್ಮಾಯಿಯವರು ತಕ್ಷಣ ಮಧ್ಯಪ್ರವೇಶ ಮಾಡಿ ನಿಸ್ಪಕ್ಷಪಾತ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು ಎಂದು ಮೇನಕಾ ಗಾಂಧಿ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ವಿರುದ್ಧ FIR ದಾಖಲು

Related Articles

Back to top button