Karnataka NewsLatestPolitics

*ಅಜ್ಜಿ ಚೆನ್ನಮ್ಮ ನಿಧನ: ಪೆರೋಲ್ ಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಅಜ್ಜಿ ಚೆನ್ನಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತುರ್ತು ಪೆರೋಲ್‌ ಕೋರಿ ಜೈಲಾಧಿಕಾರಿಗಳಿಗೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

ಅಜ್ಜಿ ಚೆನ್ನಮ್ಮ ನಿಧನದ ಸುದ್ದಿ ಕೇಳಿ ಜೈಲಿನಲ್ಲಿಯೇ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಅಜ್ಜಿಯನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ಎನ್ನಲಾಗಿದೆ. ನಾಳೆ ಹೊಳೆನರಸೀಪುರದ ಮಾವಿನಕೆರೆ ತಪ್ಪಲಿನಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಜೈಲಾಧಿಕಾರಿಗಳಿಗೆ ಪೆರೋಲ್ ಗೆ ಅರ್ಜಿ ಸಲ್ಲಿಸಿದ್ದಾರೆ.

Home add -Advt

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಜೈಲು ಸೇರಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಪೆರೋಲ್ ಸಿಕ್ಕರೆ ನಾಳೆ ಅಜ್ಜಿ ಚೆನ್ನಮ್ಮ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

Related Articles

Back to top button