Karnataka NewsLatestPolitics

*ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಫೋನ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಸಿಸಿಬಿ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿದ್ದ ವೇಳೆ ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಜ್ವಲ್ ಗೆ ಮೊಬೈಲ್ ಪೂರೈಸಿದ್ದ ಆರೋಪಿ ಪ್ರತಾಪ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

ಇಂದು ಪೊಲೀಸರು ಪ್ರಜ್ವಲ್ ರೇವಣ್ಣ ಹಾಗೂ ಆರೋಪಿ ಪ್ರತಾಪ್ ನನ್ನು ಕೋರ್ಟ್ ಗೆ ಹಾಜರು ಪಡಿಸಿ ಕಸ್ಟಡಿಗೆ ನೀಡುವಂತೆ ಕೋರಿದ್ದರು. ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ಇಬ್ಬರನ್ನೂ 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button