Kannada NewsKarnataka NewsPolitics

*ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣನನ್ನು ಶಿಫ್ಟ್ ಮಾಡುತ್ತಿದ್ದಾಗ ಪೊಲೀಸ್ ಅಧಿಕಾರಿಗಳಿಗೆ ಮಾರ್ಗ ಮಧ್ಯೆಯೇ ಪ್ರಭಾವಿ ವ್ಯಕ್ತಿ ಕರೆ*: *ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ವಾಪಸ್*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್, ಪೆನ್ ಡ್ರೈವ್, ನೋಟ್ ಬುಕ್ ಗಳು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿರುವ ಜೈಲಾಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲು ಮುಂದಾಗಿದ್ದರು.

ಜೈಲಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು ಮುಂಜಾನೆ ಪ್ರಜ್ವಲ್ ರೇವಣ್ಣ ಅವರನ್ನು ಬಿಗಿ ಭದ್ರತೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹಿಂಡಲಗಾ ಜೈಲಿನತ್ತ ಕರೆದುಕೊಂಡು ಹೋಗಲಾಗಿತ್ತು. ಬೆಂಗಳೂರಿನಿಂದ ಶಿರಾವರೆಗೆ ಸಿಎಆರ್ ಪೊಲೀಸರು ಪ್ರಯಾಣಿಸುತ್ತಿದ್ದರು. ಶಿರಾ ತಲುಪುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪ್ರಭಾವಿ ವ್ಯಕ್ತಿಯೊಬ್ಬರು ಕರೆ ಮಾಡಿದ್ದಾರೆ. ತಕ್ಷಣ ಪ್ರಜ್ವಲ್ ನನ್ನು ವಾಪಸ್ ಕರೆ ತರುವಂತೆ ಸೂಚಿದ್ದಾರೆ ಎಂದು ತಿಳಿದುಬಂದಿದೆ.

ಈ ಸಮಯದಲ್ಲಿ ಪ್ರಜ್ವಲ್ ಶಿಫ್ಟ್ ಆದರೆ ಸಮಸ್ಯೆಯಾಗುತ್ತದೆ. ವಿಪಕ್ಷಗಳಿಗೆ ಆಹಾರವಾಗುವುದು ಬೇಡ. ರಾಜಕೀಯ ಒತ್ತಡದಿಂದ ಶಿಫ್ಟ್ ಆದರೆ ಸಮಸ್ಯೆಯಾಗಲಿದೆ ಎಂದು ಆ ಪ್ರಭಾವಿ ವ್ಯಕ್ತಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಹೇಳಿದ್ದಾರೆ. ಅಲ್ಲದೇ ತಕ್ಷಣ ಬೆಂಗಳೂರಿಗೆ ವಾಪಸ್ ಕರೆತರುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

ಪ್ರಭಾವಿ ವ್ಯಕ್ತಿಯ ಕರೆಯ ಮೇರೆಗೆ ಮಧ್ಯದಾರಿಯಿಂದಲೇ ಮತ್ತೆ ಪ್ರಜ್ವಲ್ ನನ್ನು ಪರಪ್ಪನ ಅಗ್ರಹಾರ ಜೈಲಿಗೆ ವಾಪಸ್ ಕರೆತರಲಾಗಿದೆ ಎಂದು ತಿಳಿದುಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿದ ಆ ಪ್ರಭಾವಿ ವ್ಯಕ್ತಿ ಯಾರು? ಎಂಬ ಚರ್ಚೆ ಆರಂಭವಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button