ಪ್ರಗತಿವಾಹಿನಿ ಸುದ್ದಿ: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮೇ 31ರಂದು ದೇವಶಕ್ಕೆ ವಾಪಾಸ್ ಆಗಿ, ಎಸ್ಐಟಿ ಮುಂದೆ ಹಾಜರಾಗುವುದಾಗಿ ವಿಡಿಯೋ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಎಸ್ಐಟಿ ತನಿಖಾ ತಂದ ತನಿಖೆ ಇನ್ನಷ್ಟು ಚುರುಕುಗೊಳಿಸಿದೆ.
ವಿಧಿವಿಜ್ಞಾನ ಅಧಿಕಾರಿಗಳ ಜೊತೆ ಹಾಸನಕ್ಕೆ ಭೇಟಿ ನೀಡಿರುವ ಎಸ್ಐಟಿ ಅಧಿಕಾರಿಗಳು ಹಾಸನದ ಸಂಸದ ಪ್ರಜ್ವಲ್ ನಿವಾಸ, ಹೊಳೆನರಸೀಪುರದ ಹೆಚ್.ಡಿ.ರೇವಣ್ಣ ನಿವಾಸ, ಚನ್ನರಾಯಪಟ್ಟಣದ ಗನ್ನಿಕಡದ ತೋಟದ ಮನೆ ಸೇರಿದಂತೆ ಮೂರು ಕಡೆ ಬರೋಬ್ಬರಿ 10 ಗಂಟೆಗಳ ಕಾಲ ಶೋಧ ನಡೆಸಿ, ಮಾಹಿತಿ ಸಂಗ್ರಹಿಸಿದ್ದಾರೆ.
ಅತ್ಯಾಚಾರವಾಗಿದೆ ಎಂದು ಆರೋಪಿಸಿದ ಸ್ಥಳಗಳಲ್ಲಿ ಶೋಧ ನಡೆಸಿದ್ದು, ಪ್ರಜ್ವಲ್ ರೂಮಿನಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ, ರೂಂ ನ ವಿವಿಧೆಡೆಯ ಬೆರಳಚ್ಚು ಸಂಗ್ರಹಿಸಿ ಎಫ್ ಎಸ್ ಎಲ್ ಗೆ ರವಾನಿಸಲಾಗಿದೆ. ಪ್ರಜ್ವಲ್ ಭಾರತಕ್ಕೆ ವಾಪಾಸ್ ಆಗುತ್ತಿದ್ದಂತೆಯೇ ವಶಕ್ಕೆ ಪಡೆಯುವ ನಿಟ್ಟಿನಲ್ಲಿಯೂ ಎಸ್ ಐಟಿ ಸಿದ್ಧತೆ ನಡೆಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ