ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನ ಅನರ್ಹ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಸಂಸದ ಸ್ಥಾನ ಅನರ್ಹಗೊಳಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ.
ಚುನಾವಣಾ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಹಾಗಾಗಿ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹಗೊಳಿಸುವಂತೆ ಎ.ಮಂಜು ಹಾಗೂ ದೇವರಾಜೇಗೌಡ ಹೈಕೋರ್ಟ್ ನಲ್ಲಿ ತಕರಾರು ಅರ್ಜಿ ಸಲ್ಲಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ