ಪ್ರಗತಿವಾಹಿನಿ ಸುದ್ದಿ: ಮಕರ ಸಂಕ್ರಮಣದ ಸಂದರ್ಭದಲ್ಲಿ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಅಯ್ಯಪ್ಪ ಮಾಲಾಧಾರಿಗಳ ಸಾಗರವೇ ಹರಿದು ಬರುತ್ತದೆ. ಮಕರ ಸಂಕ್ರಾಂತಿಯಂದು ಅಯ್ಯಪ್ಪ ಸ್ವಾಮಿ ದೇವಾಲಯದ ಬೆಟ್ಟದಲ್ಲಿ ಮಕರ ಜ್ಯೋತಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಅಯ್ಯಪ್ಪ ಮಾಲಾಧಾರಿಗಳಾಗಿ ಅಯ್ಯಪ್ಪ ದೇವಸ್ಥಾನಕ್ಕೆ ತೆರಳುತ್ತಾರೆ.
ಈ ನಡುವೆ ಜೆಡಿಎಸ್ ಯುವ ನಾಯಕರಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಸಹೋದರ ಪರಿಷತ್ ಸದಸ್ಯ ಸೂರಜ್ ರೇವಣ್ಣ ಇಬ್ಬರೂ ಅಯ್ಯಪ್ಪ ಮಾಲಾಧಾರಿಗಳಾಗಿ, ಕೇರಳದ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ತೆರಳಿದ್ದಾರೆ.
ಅಯ್ಯಪ್ಪ ದೇವಾಲಯದ ಎದುರು ಸಹೋದರರಿಬ್ಬರು ಮಾಲಾಧಾರಿಗಳಾಗಿ ಫೋಟೋ ತೆಗೆಸಿಕೊಂಡಿದ್ದು, ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಕರ ಸಂಕ್ರಾಂತಿಯಂದು ಪ್ರಜ್ವಲ್ ರೇವಣ್ಣ ಹಾಗೂ ಸೂರಜ್ ರೇವಣ್ಣ ಇಬ್ಬರೂ ಶಬರಿಮಲೆಗೆ ತೆರಳಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ