Kannada NewsKarnataka NewsLatest

*ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್; ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ*

ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.

ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಈ ಹಿನ್ನೆಲೆಯಲ್ಲಿ ಎಸ್ ಐ ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು.

Home add -Advt

ಈ ನಿಟ್ಟಿನಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ. ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.


Related Articles

Back to top button