ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗೌಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟೀಸ್ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿರುವುದು ಸತ್ಯ. ಹಾಗಾಗಿ ಲುಕ್ ಔಟ್ ನೋಟೀಸ್ ನೀಡಲಾಗಿದೆ. ಎಲ್ಲಾ ಏರ್ ಪೋರ್ಟ್, ರೈಲು ನಿಲ್ದಾಣ, ಬಂದರು ಸೇರಿದಂತೆ ಎಲ್ಲೆಡೆ ಲುಕ್ ಔಟ್ ನೋಟೀಸ್ ನೀಡಿದ್ದೇವೆ ಎಂದರು.
ಕೇಂದ್ರ ಸರ್ಕಾರವೇ ಪ್ರಜ್ವಲ್ ಗೆ ಡಿಪ್ಲೋಮೆಟಿಕ್ ಪಾಸ್ ಪೋರ್ಟ್ ನೀಡಿದೆ. ಹಾಗಾಗಿ ಆತ ರಾತ್ರೋರಾತ್ರಿ ವಿದೇಶಕ್ಕೆ ಹಾರಿದ್ದಾನೆ. ತಕ್ಷಣ ಡಿಪ್ಲೊಮ್ಯಾಟಿಕ್ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೂ ಪತ್ರ ಬರೆದಿದ್ದಾರೆ. ಪ್ರಜ್ವಲ್ ನನ್ನು ವಿದೇಶದಿಂದ ಕರೆಸಿ ವಿಚಾರಣೆ ನಡೆಸಲಾಗುದು. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದು ಹೇಳಿದರು.
ಇದೇ ವೇಳೆ ಪ್ರಮುಖ ಆರೋಪಿ ಹೆಚ್.ಡಿ.ರೇವಣ್ಣಗೂ ಇಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ