ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ನಡುವೆ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ದೆಶಕ್ಕೆ ವಾಪಾಸ್ ಆಗಲು ಮೀನಾಮೇಷ ಎಣಿಸುತ್ತಿದ್ದು, ಎರಡು ಬಾರಿ ಟಿಕೆಟ್ ರದ್ದು ಮಾಡಿರುವುದು ಬೆಳಕಿಗೆ ಬಂದಿದೆ.
ಇನ್ನು ಪ್ರಜ್ವಲ್ ರೇವಣ್ಣ ವಿಡಿಯೋ ಹಂಚಿಕೆ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಮನೆ ಮೇಲೆ ದಾಳಿ ನಡೆಸಿದೆ.
ಪ್ರೀತಂ ಗೌಡ ಆಪ್ತರಿಗೆ ಸೇರಿದ ಹಾಸನ, ಬೆಂಗಳೂರು ಸೇರಿದಂತೆ ವಿವಿಧೆಡೆ ದಾಳಿ ನಡೆಸಲಾಗಿದ್ದು, ಈ ವೇಳೆ 10 ಪೆನ್ ಡ್ರೈವ್, ಒಂದು ಹಾರ್ಡ್ ಡಿಸ್ಕ್ ಪತ್ತೆಯಾಗಿದೆ. ಇವುಗಳನ್ನು ವಶಕ್ಕೆ ಪಡೆದ ಎಸ್ಐಟಿ ಪೆನ್ ಡ್ರೈವ್ ಗಳನ್ನು ಎಫ್ ಎಸ್ ಎಲ್ ಗೆ ಕಳುಹಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ