ಬಿಇಒ ಲಕ್ಷ್ಮಣರಾವ್ ಯಕ್ಕುಂಡಿಯಿಂದ ಸ್ವಾಗತ, ಸನ್ಮಾನ
ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಪಟ್ಟಣದ ಬಿಇಒ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರಾಗಿ ತಾಲೂಕಿನ ಬೀಡಿ ಗ್ರಾಮದ ಪ್ರಕಾಶ ಹೊಸಮನಿ ಅಧಿಕಾರ ಸ್ವೀಕರಿಸಿದರು.
ಬಳಿಕ ಕರ್ತವ್ಯಕ್ಕೆ ಹಾಜರಾದ ಹೊಸ ವ್ಯವಸ್ಥಾಪಕರನ್ನು ಬಿಇಒ ಕಚೇರಿಯ ಸಿಬ್ಬಂದಿ, ಶಿಕ್ಷಕರು ಮತ್ತು ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಸ್ವಾಗತಿಸಿ, ಸತ್ಕರಿಸಿದರು.
ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಪತ್ರಾಂಕಿತ ವ್ಯವಸ್ಥಾಪಕ ಗಣಾಚಾರಿ ಅವರನ್ನು ವರ್ಗಾವಣೆಗೊಳಿಸಿದ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಈ ಹುದ್ದೆ ತೆರವಾಗಿತ್ತು.
ಬೆಳಗಾವಿಯ ಡಯಟ್ ನಲ್ಲಿ ಸುಪರಿಂಟೆಂಡೆಂಟ್ ಎಂದು ಸೇವೆ ಸಲ್ಲಿಸುತ್ತಿದ್ದ ಪ್ರಕಾಶ
ಅವರಿಗೆ ಇಲಾಖೆಯ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಅವರು ಮುಂಬಡ್ತಿ ನೀಡಿ ಈ
ಕಚೇರಿಯ ಖಾಲಿ ಇದ್ದ ಪತ್ರಾಂಕಿತ ವ್ಯವಸ್ಥಾಪಕ ಹುದ್ದೆಗೆ ನಿಯುಕ್ತಿಗೊಳಿಸಿದ
ಹಿನ್ನೆಲೆಯಲ್ಲಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ತಾಲೂಕಿನ ಇತಿಹಾಸದಲ್ಲಿ ಮೊದಲ ಬಾರಿ ಇದೇ ತಾಲೂಕಿನ ವ್ಯಕ್ತಿಯೊಬ್ಬರು ಈ ಹುದ್ದೆಗೆ ನೇಮಕಗೊಂಡಿದ್ದು ಸಂತಸದ ವಿಷಯ ಎಂದು ಬಿಇಒ ಲಕ್ಷ್ಮಣರಾವ್ ಯಕ್ಕುಂಡಿ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಅಪ್ಪಣ್ಣ ಅಂಬಗಿ, ಶಂಕರ ಕಮ್ಮಾರ, ನೀಲಕಂಠ ಕುಂಬಾರ ಮತ್ತಿತರರು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ