Kannada NewsKarnataka NewsLatest

300 ವಾಹನ ಒದಗಿಸಿದ ಪ್ರಕಾಶ ಹುಕ್ಕೇರಿ, ಗಣೇಶ ಹುಕ್ಕೇರಿ

300 ವಾಹನ ಒದಗಿಸಿದ ಪ್ರಕಾಶ ಹುಕ್ಕೇರಿ, ಗಣೇಶ ಹುಕ್ಕೇರಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ-

ಬೆಳಗಾವಿ ಜಿಲ್ಲೆಯಲ್ಲಿ ಚಿಕ್ಕೋಡಿ ತಾಲೂಕು ಸಹ ಪ್ರವಾಹಕ್ಕೊಳಗಾಗಿದೆ. ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವುದರಿಂದ ನದಿ ದಂಡೆಯ ಹಳ್ಳಿಗಳಲ್ಲಿ ಭಾರಿ ಪ್ರಮಾಣದಲ್ಲಿ ಪ್ರವಾಹ ಬಂದಿದೆ. ನೂರಾರು ಹಳ್ಳಿಗಳು ಹಾಗೂ ಸಾವಿರಾರು ಎಕರೆ ಜಮೀನು ಜಲಾವೃತವಾಗಿದೆ.

Home add -Advt

ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಮತ್ತು ಶಾಸಕ ಗಣೇಶ ಹುಕ್ಕೇರಿ ಪ್ರವಾಹ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಪ್ರವಾಹ ಪರಿಹಾರಕ್ಕಾಗಿ ಮತ್ತು ಸಂತ್ರಸ್ತರ ಸ್ಥಳಾಂತರಕ್ಕಾಗಿ 300 ವಾಹನಗಳನ್ನು ಒದಗಿಸಿದ್ದಾರೆ.

ಪ್ರವಾಹದ ಆರಂಭದ ದಿನದಿಂದಲೂ ಇಬ್ಬರೂ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಪ್ರತಿ ಹಳ್ಳಿಯ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ. ಅಲ್ಲದೆ ಸಂತ್ರಸ್ತರಿಗೆ ಬಟ್ಟೆ ಮತ್ತಿತರ ಸಾಮಗ್ರಿಗಳನ್ನು ವಿತರಿಸುತ್ತಿದ್ದಾರೆ.

 

Related Articles

Back to top button